E-PAPER
23 Nov 2026, 02:02:45 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರನೇ ದಿನಕ್ಕೆ ಕಾಲಿಟ್ಟಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಅನಿರ್ದಿμÁ್ಟವಧಿ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಕ್ಕೆ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಹಲವು ಗಣ್ಯರು ಬೆಂಬಲ ಸೂಚಿಸುತ್ತಿದ್ದು, ಬೇಡಿಕೆಗಳು ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಹೋರಾಟದ ಸ್ಥಳಕ್ಕೆ ನಟಿ ಕಾರುಣ್ಯ ರಾಮ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿದ ನಟಿ ಕಾರುಣ್ಯ ರಾಮ್, ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರ ಕೂಡಲೇ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬ ಹಾಗೂ ಮಕ್ಕಳನ್ನು ಬಿಟ್ಟು, ಜನರ ಆರೋಗ್ಯ ಸೇವೆಗಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಅವರ ಸೇವೆ ಮತ್ತು ತ್ಯಾಗವನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ. ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ ಬಿಸ್ಕತ್ ಹಾಗೂ ಕುಡಿಯುವ ನೀರನ್ನು ವಿತರಿಸಿ ಮಾನವೀಯ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರನೇ ದಿನವೂ ಮುಂದುವರಿದ ಪ್ರತಿಭಟನೆ ಆರೋಗ್ಯ ಇಲಾಖೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯ ಪ್ರಮುಖ ಕೊಂಡಿಯಾಗಿದ್ದಾರೆ. ತಾಯಿ-ಮಗು ಆರೋಗ್ಯ, ಗರ್ಭಿಣಿಯರ ಆರೈಕೆ, ಲಸಿಕೆ ಕಾರ್ಯಕ್ರಮ, ಆರೋಗ್ಯ ಜಾಗೃತಿ, ಕುಟುಂಬ ಕಲ್ಯಾಣ ಹಾಗೂ ವಿವಿಧ ಸರ್ಕಾರಿ ಆರೋಗ್ಯ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇಷ್ಟೊಂದು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ ತಮ್ಮ ಬದುಕಿಗೆ ಅಗತ್ಯವಾದ ಸೌಲಭ್ಯಗಳು ಹಾಗೂ ನ್ಯಾಯಯುತ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೋರಾಟದ ಆರನೇ ದಿನವೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಹಾಗೂ ವಿಳಂಬ ಮಾಡದೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು. ವಿವಿಧ ಸಂಘಟನೆಗಳು, ಗಣ್ಯರಿಂದ ಬೆಂಬಲ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಿವಿಧ ಕಾರ್ಮಿಕ, ಮಹಿಳಾ, ಸಾಮಾಜಿಕ ಹಾಗೂ ಸಾರ್ವಜನಿಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿರುವ ಗಣ್ಯರು ಕಾರ್ಯಕರ್ತೆಯರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.ಮಹಿಳೆಯರ ಸಬಲೀಕರಣದ ಕುರಿತು ಮಾತನಾಡುವ ಸರ್ಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆಯರ ಬದುಕು ಮತ್ತು ಹಕ್ಕುಗಳ ವಿಚಾರದಲ್ಲಿಯೂ ಗಂಭೀರವಾಗಿ ನಡೆದುಕೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಮಹಿಳೆಯರಿಗೆ ನೆರವು ನೀಡುತ್ತಿರುವ ಸರ್ಕಾರ, ಜನರ ಆರೋಗ್ಯ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಸರ್ಕಾರ ಇದುವರೆಗೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸ್ಪಷ್ಟ ಹಾಗೂ ತೃಪ್ತಿಕರ ನಿರ್ಧಾರ ಕೈಗೊಳ್ಳದಿರುವುದು ಹೋರಾಟಗಾರರಲ್ಲಿ ಅಸಮಾಧಾನ ಮೂಡಿಸಿದೆ. ಕೇವಲ ಭರವಸೆ ನೀಡುವ ಬದಲು ಬೇಡಿಕೆಗಳ ಈಡೇರಿಕೆಗೆ ಕಾರ್ಯರೂಪದ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ಬೆಂಬಲವೂ ಹೆಚ್ಚುತ್ತಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ದೃಢ ನಿಲುವು ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರಗೆ ಜನಾರ್ಧನ ರೆಡ್ಡಿ ತಿರುಗೇಟುಬಸವ ಮಂಟಪ’ ಕೃತಿಗೆ ಕುಂವೀ ತೀವ್ರ ವಿರೋಧ ಆರನೇ ದಿನಕ್ಕೆ ಕಾಲಿಟ್ಟಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನೀರಿನ ಮಿತಬಳಕೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿಜಯೇಂದ್ರ ಸವಾಲುಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ 12 ಶಾಸಕರಿಗೆ ರಾಜಕೀಯ ಅಧಿಕಾರವಿಶ್ವಗುರು ಬಸವಣ್ಣಗೆ ಅಪಮಾನ: ದೇಶ ತೊರೆಯಲೆತ್ನಿಸಿದ ರವಿಹಂಜ್‌ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧನ15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಜನವರಿ 18 ರಿಂದ ಪರೀಕ್ಷೆ ಆರಂಭಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯನಗರಗಳ ಅಭಿವೃದ್ಧಿಗೆ ವಿಶೇಷ ಒತ್ತು: ರಸ್ತೆಗಳಿಗೆ ಹೊಸ ಗ್ರಿಡ್‌ ವ್ಯವಸ್ಥೆ - ಡಿ.ಕೆ. ಶಿವಕುಮಾರ್‌