LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!

ಬಳ್ಳಾರಿ/ಬೆಂಗಳೂರು:ಬಳ್ಳಾರಿಯ ರಾಜಕೀಯ ಅಖಾಡದಲ್ಲಿ ಮತ್ತೊಮ್ಮೆ ಸಂಚಲನ ಮೂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಾವು ಏರುತ್ತಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಿರ್ಗಮಿಸಿದ್ದ ಬಿ. ನಾಗೇಂದ್ರ, ಇದೀಗ ಮತ್ತೆ ರಾಜ್ಯ ಸಂಪುಟವನ್ನು ಪ್ರವೇಶಿಸಲು ಸಜ್ಜಾಗಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದ ಆರ್ಥಿಕ ಅಕ್ರಮಗಳ ಸರಣಿ ಆರೋಪಗಳು ಹಾಗೂ ವಿಪಕ್ಷಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ತಮ್ಮ ಸ್ಥಾನವನ್ನು ತ್ಯಜಿಸಬೇಕಾಗಿ ಬಂದಿತ್ತು. ಆದರೆ ರಾಜೀನಾಮೆ ನೀಡಿದ ಮರುಕ್ಷಣದಿಂದಲೇ, ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮಟ್ಟದಲ್ಲಿ ತಮ್ಮ ನಿರ್ದೋಷಿತ್ವವನ್ನು ಸಾಬೀತುಪಡಿಸಲು ಮತ್ತು ಸಂಪುಟಕ್ಕೆ ಮರಳಲು ಅವರು ತೆರೆಮರೆಯ ಕಸರತ್ತುಗಳನ್ನು ಆರಂಭಿಸಿದ್ದರು. ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸಿ, ನಾಯಕತ್ವದ ಗಮನ ಸೆಳೆಯುವಲ್ಲಿ ನಾಗೇಂದ್ರ ಹಾಗೂ ಅವರ ಬೆಂಬಲಿಗರು ಯಶಸ್ವಿಯಾಗಿದ್ದಾರೆ.

ಈ ಬೆಳವಣಿಗೆಯ ಮತ್ತೊಂದು ಪ್ರಮುಖ ಮುಖವೆಂದರೆ ಬಳ್ಳಾರಿ ಜಿಲ್ಲೆಯ ಪ್ರಾತಿನಿಧ್ಯ. ರಾಜ್ಯ ರಾಜಕಾರಣದಲ್ಲಿ ಹೈದರಾಬಾದ್-ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ಪ್ರಭಾವಿ ಜಿಲ್ಲೆಯಾದ ಬಳ್ಳಾರಿಗೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿರಲಿಲ್ಲ ಎಂಬ ಅಸಮಾಧಾನ ಪ್ರಾದೇಶಿಕ ನಾಯಕರಲ್ಲಿತ್ತು. ನಾಗೇಂದ್ರ ಅವರ ಪುನರ್ ಸೇರ್ಪಡೆಯೊಂದಿಗೆ ಬಳ್ಳಾರಿಗೆ ಕೊನೆಗೂ ಮಂತ್ರಿ ಸ್ಥಾನ ಲಭಿಸಿದಂತಾಗಿದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಸಮೀಕರಣಗಳು ಬದಲಾಗಿದ್ದವು. ಡಿಕೆಶಿ ಸಿಎಂ ಪಟ್ಟಕ್ಕೇರಿ ಎರಡು ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನೆನೆಗುದಿಗೆ ಬಿದ್ದಿತ್ತು. ವಿವಿಧ ಬಣಗಳ ಒತ್ತಡ, ಪ್ರಾದೇಶಿಕ ಸಮತೋಲನ ಮತ್ತು ಸಾಮಾಜಿಕ ಲೆಕ್ಕಾಚಾರಗಳನ್ನು ಸರಿದೂಗಿಸುವುದು ಆಡಳಿತ ಪಕ್ಷಕ್ಕೆ ದೊಡ್ಡ ಸವಾಲಾಗಿತ್ತು.

ಸುಮಾರು ಎರಡು ತಿಂಗಳ ಕಾಲ ನಡೆದ ದೀರ್ಘ ಚರ್ಚೆಗಳು, ದೆಹಲಿ ಮಟ್ಟದ ಸಭೆಗಳು ಹಾಗೂ ತೀವ್ರ ಹಗ್ಗಜಗ್ಗಾಟದ ನಂತರ ನಡೆಯುತ್ತಿರುವ ಈ ಸಂಪುಟ ವಿಸ್ತರಣೆಯು 'ಗಜಪ್ರಸವ'ದಂತೆ ಕಷ್ಟಕರವಾಗಿತ್ತು ಎಂಬುದರಲ್ಲಿ ಸಂಶಯವಿಲ್ಲ. ಏನೇ ಆದರೂ, ಸವಾಲುಗಳ ಸುಳಿಯಿಂದ ಹೊರಬಂದು ಬಿ. ನಾಗೇಂದ್ರ ಅವರು ಮರಳಿ ಸಚಿವ ಸಂಪುಟ ಸೇರುತ್ತಿರುವುದು ಬಳ್ಳಾರಿ ರಾಜಕಾರಣದಲ್ಲಿ ಹಾಗೂ ನಾಯಕ ಸಮುದಾಯದಲ್ಲಿ ಹೊಸ ಸಂಚಲನ ಮೂಡಿಸಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!