LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ತಿರುಪತಿ ಕಾಲ್ತುಳಿತ ದುರಂತ: 7ಕ್ಕೆ ಏರಿದ ಸಾವಿನ ಸಂಖ್ಯೆ

ತಿರುಪತಿ: ವಿಶ್ವಪ್ರಸಿದ್ಧ ತಿರುಪತಿ ವೆಂಕಟರಮಣ ದೇಗುಲದಲ್ಲಿ ಬುಧವಾರ ರಾತ್ರಿ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 7 ಮಂದಿ ಸಾವನ್ನಪ್ಪಿದ್ದು, 48 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ವೈಕುಂಠ ಏಕಾದಶಿ (ಜನವರಿ 10) ಹಿನ್ನೆಲೆ ವೈಕುಂಠ ದ್ವಾರ ದರ್ಶನಕ್ಕೆ ಟೋಕನ್ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಈ ಟೋಕನ್ ವಿತರಣಾ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ವೈಕುಂಠ ಏಕಾದಶಿ ಹಿನ್ನೆಲೆ 2 ದಿನಗಳ ಮುಂಚಿತವಾಗಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಸಾವಿರಾರು ಜನರು ತಿರುಪತಿಗೆ ಭೇಟಿ ನೀಡಿದ್ದರು. ಅಲ್ಲದೇ ಟೋಕನ್ ವಿತರಣಾ ಕೌಂಟರ್‌ಗಳ ಮುಂದೆ ಸಾವಿರಾರು ಜನರು ನಿಂತಿದ್ದರು.
ಈ ದುರ್ಘಟನೆಯಲ್ಲಿ 48 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರು ಕರ್ನಾಟಕ, ತಮಿಳುನಾಡು ಹಾಗೂ ವಿಶಾಖಪಟ್ಟಣ ಮೂಲದವರು ಎನ್ನಲಾಗುತ್ತಿದೆ. ಕಾಲ್ತುಳಿತ ದುರಂತದಲ್ಲಿ ಆರು ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಅವರನ್ನು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗಾಯಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ತಿರುಪತಿಗೆ ತೆರಳಿದ್ದರು.
ದುರಂತ ಉಂಟಾಗಿದ್ದು ಹೇಗೆ?
ವೈಕುಂಠ ಏಕಾದಶಿ ನಿಮಿತ್ತ ತಿರುಪತಿಯ 94 ಕೇಂದ್ರಗಳಲ್ಲಿ ಸರ್ವದರ್ಶನಂ ಟೋಕನ್ ನೀಡಲು ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ಜನವರಿ 9 ಮುಂಜಾನೆ 5 ಗಂಟೆಗೆ ಟೋಕನ್ ವಿತರಣೆ ಆರಂಭವಾಗಬೇಕಿತ್ತು. ಆದರೆ ಟೋಕನ್ ವಿತರಣಾ ಕೇಂದ್ರಗಳ ಮುಂದೆ ಬುಧವಾರ (ಜನವರಿ 8) ಬೆಳಿಗ್ಗೆ 5 ಗಂಟೆಯಿAದಲೇ ಜನರು ಕ್ಯೂನಲ್ಲಿ ನಿಂತಿದ್ದರು. ರಾಮನಾಯ್ದು ಶಾಲೆಯ ಟೋಕನ್ ಕೇಂದ್ರದ ಬಳಿ ನಿಂತಿದ್ದ ಮಹಿಳೆಯೊಬ್ಬರು ಅಸ್ವತ್ಥರಾಗುತ್ತಾರೆ. ಆ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಗೇಟ್ ತೆರೆಯಲಾಗುತ್ತದೆ. ಆ ಹೊತ್ತಿಗೆ ಏಕಾಏಕಿ ಜನರು ಎಲ್ಲಿ ನುಗ್ಗಲು ಆರಂಭಿಸಿದರು, ಇದರಿಂದ ಕಾಲ್ತುಳಿತ ಉಂಟಾಯಿತು ಎಂದು ಎಂದು ಪೊಲೀಸರು ಹೇಳುತ್ತಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ