LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
International News

ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು.

ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ. 'ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿAದಲೇ ಈ ಪುಸ್ತಕ ರೂಪುಗೊಂಡಿತು' ಎಂದು ಹೇಳಿದ್ದಾರೆ. 'ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು' ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ. ಫ್ರೆಂಚ್‌ನಿAದ ಅನುವಾದವಾದ ಎರಡು ಕೃತಿಗಳು, ಜಪಾನ್, ಇಟಾಲಿಯನ್ ಹಾಗೂ ಡ್ಯಾನಿಷ್ ಭಾಷೆಯ ತಲಾ ಒಂದು ಕೃತಿ 'ಶಾರ್ಟ್ ಲಿಸ್ಟ್'ನಲ್ಲಿದ್ದವು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ