LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.

ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಬಗ್ಗೆ ಸದಾ ನಿಗಾ ವಹಿಸಬೇಕು. ಸಾಮರಸ್ಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭಾರತ – ಪಾಕಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದರು.  ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಬೇಕು. ಪ್ರಮುಖ ಸ್ಥಳಗಳಲ್ಲಿ ಅಣಕು ಪ್ರದರ್ಶನ ನಡೆಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಕಟ್ಟಪ್ಪಣೆ ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರೀಯ ಮಹತ್ವದ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಪತ್ತೆಗೆ ಫ್ಯಾಕ್ಟ್ ಚೆಕ್ ಅನ್ನು ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು. ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಎಲ್ಲಾ ಕಮಿಷನರೇಟ್ ಗಳಲ್ಲಿ ಅಲರ್ಟ್ ಆಗಿರಬೇಕು. ಪ್ರಮುಖ ಸ್ಥಾವರಗಳಲ್ಲಿ ಭದ್ರತೆಯನ್ನು ಹೆಚ್ಚಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಭದ್ರತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮೂಲಕ ಬೆಲೆ ಏರಿಕೆ ಮಾಡುವ ಪ್ರಯತ್ನಗಳನ್ನು ತಪ್ಪಿಸಬೇಕು. ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಸಹ ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ