LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬಳ್ಳಾರಿ : ನೂತನ ವರ್ಷಾರಂಭದಲ್ಲಿ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ಸಂಬAಧಿಸಿದAತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಭೆಯಲ್ಲಿ ಗನ್ ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತನ ಸಾವು ಉಂಟಾಗಿತ್ತು.

ಈ ಕುರಿತು ಬಳ್ಳಾರಿ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರು ಜನಪ್ರತಿನಿಧಿಗಳ ನಡುವೆ ಸಂಭವಿಸಿದ ಸಂಘರ್ಷ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಪೊಲೀಸರ ಗನ್ ಹಾಗೂ ರಿವಾಲ್ವರ್‌ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್‌ನಿಂದ ಫೈರಿಂಗ್ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು,ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದರು.

ಬ್ಯಾನರ್ ಗಲಾಟೆ ಪ್ರಕರಣದ ತನಿಖೆ ಸಾಗುತ್ತಿರುವ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಹಲವು ಭಾರಿ ಪರೆಸ್ ಮೀಟ್ ಮಾಡಿ ಅಸಮಾಧಾನ ಹೊರ ಹಾಕಿದ್ದರು. ಶುಕ್ರವಾರದಂದು ಮತ್ತೊಮ್ಮೆ ಪತ್ರಿಕಾಘೋಷ್ಠಿ ನಡೆಸಿ, ಘಟನೆಯಲ್ಲಿ ಮೃತಪಟ್ಟಿದ್ದ ರಾಜಶೇಖರ್ ಮತೃದೇಹ ಹೂಳಲು ಮೊದಲು ಗುಂಡಿ ತೋಡಿ, ಆ ನಂತರ ಶವ ಸುಡಲಾಗಿದೆ. ಶಾಸಕ ಭರತ್ ರೆಡ್ಡಿ ನಿರ್ದೇಶನದಂತೆ ಕೊಲೆಯಾಗಿದೆ. ತಂದೆ ಸಮಾಧಿ ಬಳಿ ರಾಜಶೇಖರ್ ಅಂತ್ಯಕ್ರಿಯೆ ಆಗಬೇಕು ಎಂದಿದ್ದರು. ಆದರೆ ಹೂಳಲು ತೋಡಿದ್ದ ಗುಂಡಿ ಮುಚ್ಚುವಂತೆ ನಿರ್ದೇಶನ ಬಂದಿದೆ. ಹೀಗಾಗಿ ಸ್ಮಶಾನದಲ್ಲಿ ತೋಡಿದ್ದ ಗುಂಡಿಯನ್ನು ತೆಂಗಿನಕಾಯಿ ನೀರು ಹಾಕಿ ಮುಚ್ಚಿದ್ದಾರೆ. ಬಳಿಕ ಯಾವುದೇ ಸಾಕ್ಷ್ಯ ಸಿಗದ ಹಾಗೆ ರಾಜಶೇಖರ್ ಮೃತದೇಹವನ್ನು ಗ್ಯಾಸ್‌ನಿಂದ ಸುಡಲಾಗಿದೆ. ಘಟನೆ ನಡೆದು 9 ದಿನಗಳಾದರೂ ಒಬ್ಬ ಗನ್‌ಮ್ಯಾನ್ ಮಾತ್ರ ಬಂಧನ ಮಾಡಲಾಗಿದೆ. ಭರತ್ ರೆಡ್ಡಿಯನ್ನು ಯಾಕೆ ಬಂಧಿಸಿಲ್ಲ ಎಂದು ರೆಡ್ಡಿ ಪ್ರಶ್ನಿಸಿದ್ದರು. ಘಟನೆಗೆ ಕಾರಣಕರ್ತರಾದ ಶಾಸಕನ ಬಂಧನವಾಗಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ