LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಬಾಂಬ್ ಸ್ಫೋಟಕ್ಕೆ ನಿರ್ದೇಶನ ನೀಡಲೆಂದು ಇಲ್ಲಿ ಮೊಬೈಲ್ ಕೊಡಲಾಯಿತೇ: ಸಿಟಿ ರವಿ

ಬೆಂಗಳೂರು: ಆರ್‍ಡಿಎಕ್ಸ್ ಸ್ಫೋಟಕ ಬಳಸುವವರು ಮತ್ತು ಅದನ್ನು ಸಂಗ್ರಹಿಸುವವರು ಯಾರು?. ಅವರು ಯಾವ ಶಾಂತಿ ಧರ್ಮಕ್ಕೆ ಸೇರಿದವರೆಂದು ಮುಖ್ಯಮಂತ್ರಿಯವರು ತಿಳಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸವಾಲು ಹಾಕಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈಚೆಗೆ ಒಂದು ಸಭೆಯಲ್ಲಿ ಇಸ್ಲಾಂ ಎಂದರೆ ಶಾಂತಿ ಎಂದಿದ್ದರು. ಅದನ್ನು ಒಪ್ಪೋಣ. ಡಾ. ಅಹ್ಮದ್ ಮೊಹಿಯುದ್ದೀನ್ ಸಯೀದ್ ಪ್ರಾಣ ಉಳಿಸುವ ವೈದ್ಯನಲ್ಲ. ಸಾಮೂಹಿಕ ನರಮೇಧದ ತಯಾರಿ ಮಾಡುತ್ತಿದ್ದ ವ್ಯಕ್ತಿ. ಯಾವ ಶಾಂತಿ ಧರ್ಮಕ್ಕೆ ಸೇರಿದವನು ಎಂದು ಕೇಳಿದರು. ಇನ್ನೊಬ್ಬ ಸಯ್ಯದ್ ಮೊಹಮ್ಮದ್ ಸುಹೇಲ್ ಮತ್ತು ಆಜಾದ್ ಯಾವ ಶಾಂತಿ ಧರ್ಮಕ್ಕೆ ಸೇರಿದವರು ಎಂದು ಪ್ರಶ್ನಿಸಿದರು.

ದೇಶದ ಉದ್ದಗಲಕ್ಕೆ ಆರ್‍ಡಿಎಕ್ಸ್ ಪತ್ತೆಯಾಗಿದೆ. ಯಾವ ಶಾಂತಿದೂತರು ಅದನ್ನು ಕಳಿಸಿಕೊಟ್ಟರು?. ಮುಖ್ಯಮಂತ್ರಿಗಳು ಬೇಹುಗಾರಿಕಾ ದಳದಿಂದ ಈ ಕುರಿತು ವರದಿ ತರಿಸಿಕೊಳ್ಳಬೇಕು. ಇನ್ನೊಬ್ಬ ಭಯೋತ್ಪಾದಕನಿಗೆ ಇಲ್ಲಿನ ಜೈಲಿನಲ್ಲಿ ಮೊಬೈಲ್ ಕೊಟ್ಟಿದ್ದೀರಲ್ಲವೇ? ಅವನ್ಯಾವ ಶಾಂತಿದೂತ? ದೇಶದ ಉದ್ದಗಲಕ್ಕೆ ಬಾಂಬ್ ಸ್ಫೋಟ ನಡೆಸಲು ನೆರವಾಗಲೆಂದು ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಕೊಟ್ಟಿದ್ದೀರಾ ಎಂದು ಕೇಳಿದರು. ಬಾಂಬ್ ಸ್ಫೋಟಕ್ಕೆ ನಿರ್ದೇಶನ ನೀಡಲೆಂದು ಮೊಬೈಲ್ ಕೊಡಲಾಯಿತೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಪ್ರಿಯಾಂಕ್ ಖರ್ಗೆಯವರೇ, ಅಸಮರ್ಥರು ಎನ್ನುತ್ತೀರಲ್ಲವೇ? ಭಯೋತ್ಪಾದಕರಿಗೆ ಮೊಬೈಲ್ ಕೊಡುವ ಅಯೋಗ್ಯರನ್ನು ಅಸಮರ್ಥರು ಎನ್ನುತ್ತಾರೆ. ಅವರ ನೇತೃತ್ವ ವಹಿಸಿದ ಸರಕಾರವನ್ನು ಅಸಮÀರ್ಥ ಎನ್ನುತ್ತಾರೆ. ಸರ್ಜಿಕಲ್ ದಾಳಿ, ಆಪರೇಷನ್ ಸಿಂದೂರದ ಮೂಲಕ ಉತ್ತರ ಕೊಡುವವರು ಅಸಮರ್ಥರಲ್ಲ ಎಂದು ಸಿ.ಟಿ. ರವಿ ಅವರು ತಿಳಿಸಿದರು.

ಬಿರಿಯಾನಿ ಕೊಡುವುದು ಇದೆಯಲ್ಲವೇ? ಯಾಸಿನ್ ಮಲಿಕ್ ಜೀ ಎನ್ನುವುದು ಇದೆಯಲ್ಲವೇ? ಹಾಗೇ ಪ್ರಧಾನಿ ಕಚೇರಿಗೆ ಕರೆದು ಚಹಾ ಕೊಟ್ಟು ಆಲಂಗಿಸಿಕೊಳ್ಳುವುದು ಅಸಮರ್ಥತೆ ಎಂದು ಟೀಕಿಸಿದರು.

ಮೋದಿಜೀ, ಅಮಿತ್ ಶಾ ಜೀ, ಈಗಿನ ಭಾರತ ಸರಕಾರದ ಮೇಲೆ ಜನರಿಗೆ ವಿಶ್ವಾಸ ಇದೆ. ಇವರು ಭಯೋತ್ಪಾದಕರ ಜೊತೆ ಸೇರಿ ಲಾಭ- ನಷ್ಟದ ಲೆಕ್ಕಾಚಾರ ಹಾಕುವುದಿಲ್ಲ. ಅವರನ್ನು ಬೇರು ಸಹಿತ ಕಿತ್ತು ಹಾಕುವ ಸರ್ವ ಪ್ರಯತ್ನವನ್ನೂ ಮಾಡುತ್ತಾರೆ; ಮಾಡಿದ್ದಾರೆ ಎಂದು ನುಡಿದರು.

ನೀವೇನು ಮಾಡಿದ್ದೀರಿ? ಸಂಸತ್ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಪರ ವಕಾಲತ್ತು ವಹಿಸಿದ ವಕೀಲರ ಪಟ್ಟಿ ಕೊಡಲೇ? ಎಂದು ಕೇಳಿದರು. ನಿಮ್ಮ ಯಾವ್ಯಾವ ಕಾಂಗ್ರೆಸ್ ನಾಯಕರು ಅವನ ಪರ ಮಾತನಾಡಿದರೆಂದು ಲಿಸ್ಟ್ ಕೊಡಲೇ ಎಂದು ಪ್ರಶ್ನಿಸಿದರು.

ಈಚೆಗೆ ಗುಜರಾತ್, ಜಮ್ಮು-ಕಾಶ್ಮೀರ, ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಎನ್‍ಐಎ, ಎಟಿಎಸ್ ಹಲವು ಭಯೋತ್ಪಾದಕರನ್ನು ಬಂಧಿಸಿದ್ದವು. ಅವರು ಇಡೀ ದೇಶದಲ್ಲಿ ವಿಧ್ವಂಸಕ ಕೃತ್ಯ ಮಾಡಲು ಸಂಚು ನಡೆಸಿದ್ದು, ಅಪಾಯಕಾರಿ ರಿಸಿನ್‍ನಂಥ ವಿಷವನ್ನು ತಯಾರಿಸಿ ಸಾಮೂಹಿಕ ನರಮೇಧಕ್ಕೆ ಯೋಜನೆ ರೂಪಿಸಿದ್ದನ್ನು ಎನ್‍ಐಎ, ಎಟಿಎಸ್ ಮತ್ತು ಪೊಲೀಸ್ ಇಲಾಖೆ ವಿಫಲಗೊಳಿಸಿದೆ ಎಂದು ವಿವರಿಸಿದರು.

ಅಪಾರ ಪ್ರಮಾಣದಲ್ಲಿ ಆರ್‍ಡಿಎಕ್ಸ್ ಕೂಡ ವಶಕ್ಕೆ ಪಡೆದಿದೆ. ಯೋಜನಾಬದ್ಧವಾದ ಭಯೋತ್ಪಾದನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದನ್ನು ಊಹಿಸಬಹುದು. ನಮ್ಮ ಬೇಹುಗಾರಿಕಾ ವ್ಯವಸ್ಥೆ ಎನ್‍ಐಎ ಸಾಕಷ್ಟು ಎಚ್ಚರ ವಹಿಸಿದ್ದರಿಂದ ದೊಡ್ಡ ಅಪಾಯ ತಪ್ಪಿದೆ ಎಂದು ವಿಶ್ಲೇಷಿಸಿದರು. ಇದರಿಂದ ಹತಾಶರಾದ ಭಯೋತ್ಪಾದಕರು ಕೆಂಪು ಕೋಟೆಯನ್ನು ಗುರಿಯಾಗಿ ಇಟ್ಟುಕೊಂಡು, ತಾವಿನ್ನೂ ಬದುಕಿದ್ದೇವೆ ಎಂಬುದನ್ನು ತಮ್ಮ ಭಯೋತ್ಪಾದಕ ಕೃತ್ಯದ ಮೂಲಕ ತೋರಿಸಿದ್ದಾರೆ ಎಂದು ತಿಳಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ