LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್.ಐ.ಟಿ ತಂಡಕ್ಕೆ ಸಿಎಂ ಪದಕ – ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್.ಐ.ಟಿ ತಂಡಕ್ಕೆ ಸಿಎಂ ಪದಕ – ಪರಮೇಶ್ವರ್

ಬೆಂಗಳೂರು.ಆ.3: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು ೧೦ ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿತು ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ತನಿಖೆ ನಡೆಸಿದ ಎಸ್‌ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎಸ್‌ಐಟಿ ತಂಡಕ್ಕೆ ಸಿಎಂ ಪದಕ ನೀಡಲಾಗುತ್ತದೆ ಎಂದು ಘೋಷಿಸಿದರು.

Karnataka home minister rejects demand for CBI probe in sexual harassment  cases against Prajwal Revanna | The South India Times

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆ ನೀಡಿರುವ ವಿಚಾರವಾಗಿ ಪೊಲೀಸರು ಮೊದಲಿನಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್‌ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು ನ್ಯಾಯಾಲಯಕ್ಕೆ ನಮ್ಮ ಎಸ್‌ಐಟಿಗೆ ಎಲ್ಲ ದಾಖಲೆಯನ್ನು ಕೊಟ್ಟಿತ್ತು. ಪೊಲೀಸರು ಬೇಗ ತನಿಖೆ ಬೇಗ್ ಮುಗಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Have written to Centre to cancel Prajwal Revanna's diplomatic passport:  Parameshwara - Daijiworld.com

ಪ್ರಜ್ವಲ್ ರೇವಣ್ಣ ಈ ಒಂದು ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ವ್ಯಕ್ತಪಡಿಸುತ್ತದೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ಅಲ್ಲದೇ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಇನ್ನು ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಮಗೆಷ್ಟು ಗೊತ್ತಿದೆಯೋ ನಮಗೂ ಅಷ್ಟೇ ಗೊತ್ತಿದೆ. ತನಿಖಾ ಹಂತದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಇನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರಿಗೆ ಬರುತ್ತಿದ್ದಾರೆ.ಅವರ ಹಂತದಲ್ಲಿ ಚರ್ಚೆ ಮಾಡಿ ಪಟ್ಟಿ ಫೈನಲ್ ಆಗಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ