LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಮೆಟ್ರೋ ದರ ಏರಿಕೆ: ಜನರ ಎದಿರೇಟಿಗೆ ಮಣಿದ ಸಿಎಂ - ಪ್ರಲ್ಹಾದ ಜೋಶಿ ಪ್ರತಿಕ್ರಿಯೆ

ನವದೆಹಲಿ: ಮೆಟ್ರೋ ದರ ಏರಿಸಿ ಕೇಂದ್ರಕ್ಕೆ ಅದರ ಹಣೆಪಟ್ಟಿ ಕಟ್ಟಲು ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನರೇ ಎದಿರೇಟು ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.ಬಿಎಂಆರ್ ಸಿಎಲ್ ಮೆಟ್ರೋ ದರ ಪರಿಷ್ಕರಣೆ ಮಾಡಿದ ಬಳಿಕ ಕೇಂದ್ರ ಸರ್ಕಾರದತ್ತ ಬೆರಳು ತೋರಿ ಆರೋಪ ಹೊರಿಸಿದ್ದ ಸಿಎಂ ಈಗ ಜನರ ವಿರೋಧ ತಾರಕಕ್ಕೇರುತ್ತಲೇ ಮಣಿದು ಬೆಲೆ ಇಳಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಸಿಎಂ ಯೂಟರ್ನ್: ಬೆಂಗಳೂರಿನಲ್ಲಿ ಜನ ಮೆಟ್ರೋ ರೈಲು ಸಂಚಾರ ತಿರಸ್ಕರಿಸುತ್ತಿದ್ದಂತೆ ಸಿಎಂ ಯೂಟರ್ನ್ ಹೊಡೆದಿದ್ದಾರೆ. ಈಗ ಟಿಕೆಟ್ ದರ ಕಡಿಮೆ ಮಾಡುವಂತೆ ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವ ಜೋಶಿ ಟೀಕಿಸಿದ್ದಾರೆ.ರಾಜ್ಯದಲ್ಲಿ ಜನ ಸಹಿಸದೇ ಇರುವುದನ್ನು ತಾನೇನೇ ಮಾಡಿದರೂ ಅದನ್ನು ಕೇಂದ್ರ ಸರ್ಕಾರದ ಹಣೆಗೆ ಕಟ್ಟಲು ನೋಡುತ್ತದೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಅಗತ್ಯತೆಗಳ ಬೆಲೆ ಏರಿಕೆ ಕೈ ಬಿಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದನ್ನು ಬಿಟ್ಟು ‌ಜನಾಭಿಪ್ರಾಯಕ್ಕೆ ಗೌರವ ನೀಡಲಿ. ಇನ್ನಾದರೂ ಜನರ ಅಗತ್ಯತೆಗಳ ಬೆಲೆ ಏರಿಕೆ ನೀತಿಯನ್ನು ಕೈಬಿಡಲಿ ಎಂದು ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ