LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ರೈತರ ಪರ ನಿಲುವು ತಳೆದ ಸಿಎಂ ಸಿದ್ದರಾಮಯ್ಯ!

ರೈತರ ಪರ ನಿಲುವು ತಳೆದ ಸಿಎಂ ಸಿದ್ದರಾಮಯ್ಯ!

ದೇವನಹಳ್ಳಿ ರೈತರ ಹೋರಾಟಕ್ಕೆ ಈ ಮೂಲಕ ಅತಿದೊಡ್ಡ ಜಯ ಸಿಕ್ಕಿದೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ಅನೇಕ ಸಂಘಟನೆಗಳು, ಚಿಂತಕರು, ಸಾಹಿತಿಗಳು ರೈತರ ಹೋರಾಟಕ್ಕೆ ಸಾಥ್‌ ನೀಡಿದ್ದರು ಹಾಗೂ ಸಿಎಂಗೆ ಮನವಿ ಮಾಡಿದ್ದರು.
ರೈತರ ಮೊರೆಗೆ ಮಣಿದ ಸಿಎಂ ಸಿದ್ದರಾಮಯ್ಯ, ದೇವನಹಳ್ಳಿ ಭೂಸ್ವಾಧೀನ ರದ್ದು

Devanahalli Famers Victory: ದೇವನಹಳ್ಳಿಯಲ್ಲಿ ಭೂಸ್ವಾಧೀನ ರದ್ದಿಗೆ ಸಿಎಂ  ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ, ರೈತರ ಹೋರಾಟಕ್ಕೆ ಜಯ | Bengaluru/Bangalore News  - Read Latest News And Live Updates ...
ಹರೀಶ್‌ ಕೇರ ಹರೀಶ್‌ ಕೇರ

ಬೆಂಗಳೂರು : ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರಕಾರ ಕೊನೆಗೂ ಮಣಿದಿದೆ. ಕೈಗಾರಿಕಾಭಿವೃದ್ಧಿಗಾಗಿ ನಡೆಸಲು ಉದ್ದೇಶಿಸಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈಬಿಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ.

Section of Devanahalli farmers meets CM, seeks ₹3.5 crore compensation per  acre, jobs for children of land-losers - The Hindu

ದೇವನಹಳ್ಳಿ ರೈತರ ಹೋರಾಟಕ್ಕೆ ಈ ಮೂಲಕ ಅತಿದೊಡ್ಡ ಜಯ ಸಿಕ್ಕಿದೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.

CM Siddaramaiah: ದೇವನಹಳ್ಳಿ ಭೂಸ್ವಾಧೀನ ಸಂಪೂರ್ಣ ಕೈಬಿಟ್ಟಿದ್ದೇವೆ, ಸ್ವ ಇಚ್ಛೆಯಿಂದ  ಕೊಟ್ಟರೆ ಸ್ವಾಧೀನ: ಸಿಎಂ ಸಿದ್ದರಾಮಯ್ಯ - Kannada News | devanahalli land  acquisition aborted only ...

ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ದೇವನಹಳ್ಳಿ ತಾಲ್ಲೂಕು ಚೆನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ಕೆ.ಐ.ಎ.ಡಿ.ಬಿ.ಕೈಗಾರಿಕಾಭಿವೃದ್ದಿ ಹೆಸರಲ್ಲಿ ಸ್ವಾಧೀನಕ್ಕೆ ಪಡೆಯಲು ಅಧಿಸೂಚನೆ ಹೊರಡಿಸಲಾಗಿತ್ತು. ರೈತರು ಇದನ್ನು ವಿರೋಧಿಸಿ 1195 ದಿನಗಳಿಂದ ಹೋರಾಟ ನಡೆಸಿದ್ದರು. ಅನೇಕ ಸಂಘಟನೆಗಳು, ಚಿಂತಕರು, ಸಾಹಿತಿಗಳು ರೈತರಿಗೆ ಸಾಥ್‌ ನೀಡಿದ್ದರು ಹಾಗೂ ಸಿಎಂಗೆ ಮನವಿ ಮಾಡಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ