LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ದೃಢ: ಸಿಐಡಿ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ

ಬೆಂಗಳೂರು : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ.ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.

ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.

ಪ್ರಕರಣದ ಹಿನ್ನೆಲೆ
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡುವೆ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆದಿದ್ದ ಘಟನಾವಳಿ ಕುರಿತ ವಿಡಿಯೋ ನೀಡುವಂತೆ ಡಿಎಪಿಆರ್‌ಗೆ ಪತ್ರ ಬರೆದಿತ್ತು. ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆರ್ ಇಲಾಖೆ ವಿಡಿಯೋ ನೀಡಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಫ್ರಸ್ಟ್ರೇಟ್ ಎಂಬ ಪದ ಬಳಸಿದ್ದೇನೆ ಹೊರತು ನಿಂದಿಸಿಲ್ಲ ಎಂದು ಸಿಟಿ ರವಿ ಅವರು ಹೇಳುತ್ತಿದ್ದಾರೆ. ಅಲ್ಲದೇ ತಾನು ನಿಂದಿಸಿದ್ದಕ್ಕೆ ಅಸಲಿ ವಿಡಿಯೋವೇ ಇಲ್ಲ ಎಂದು ಹೇಳಿದ್ದರು. ಇನ್ನೊಂದಡೆ, ರವಿ ಅವರು ನಿಂದಿಸಿ ಕುರಿತು ಯಾವುದೇ ಆಡಿಯೋ-ವಿಡಿಯೋ ಇಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು