LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
International News

ENG vs IND Tests: ಇಂಗ್ಲೆಂಡ್ ಪ್ರಕಟಿಸಿದ ಬಲಿಷ್ಠ ತಂಡ ಹೇಗಿದೆ ಗೊತ್ತಾ !

ಇಂಗ್ಲೆಂಡ್ vs ಇಂಡಿಯಾ ಟೆಸ್ಟ್ ಸರಣಿಗೆ ಇಂಗ್ಲೆಂಡ್ ಟೀಮ್ ರೆಡಿ !

ಎಂಟನೇ ಸ್ಥಾನದಲ್ಲಿ ಉತ್ತಮ ಬ್ಯಾಟಿಂಗ್ ಆಯ್ಕೆಯನ್ನು ನೀಡುತ್ತಿರುವುದರಿಂದ ವೋಕ್ಸ್ ಮತ್ತು ಒವರ್ಟನ್ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ನಡೆಯುವ ಸಾಧ್ಯತೆಯಿದೆ. ಜೂನ್ 6 (ಶುಕ್ರವಾರ) ರಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ವೋಕ್ಸ್ ಮತ್ತು ಜೋಶ್ ಟಂಗ್ ಭಾರತ ಎ ವಿರುದ್ಧ ಇಂಗ್ಲೆಂಡ್ ಲಯನ್ಸ್ ಪರ ಆಡಲಿದ್ದಾರೆ.

ಲಂಡನ್‌: ಪ್ರವಾಸಿ ಭಾರತ(ENG vs IND) ವಿರುದ್ಧದ 5 ಪಂದ್ಯಗಳ ತವರಿನ ಟೆಸ್ಟ್‌ ಸರಣಿಯ ಮೊದಲ ಪಂದ್ಯಕ್ಕೆ(ENG vs IND Tests) ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಗುರುವಾರ 14 ಸದಸ್ಯರ ಬಲಿಷ್ಠ ತಂಡವನ್ನು(England squad) ಪ್ರಕಟಿಸಿದೆ. ಆದರೆ ಜೂನ್ 20 ರಿಂದ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯಲಿರುವ ಸರಣಿಯ ಮೊದಲ ಪಂದ್ಯದಿಂದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಕೈಬಿಡಲಾಗಿದೆ.

ಗಸ್ ಅಟ್ಕಿನ್ಸನ್ ಕಳೆದ ತಿಂಗಳು ಜಿಂಬಾಬ್ವೆ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಆರು ಓವರ್‌ಗಳನ್ನು ಬೌಲಿಂಗ್ ಮಾಡಿದ ನಂತರ ಅವರು ಅಲಭ್ಯರಾಗಿದ್ದರು. ಚೇತರಿಕೆ ಕಾಣದ ಅವರನ್ನು ಮೊದಲ ಪಂದ್ಯದಿಂದ ಹೊರಗಿಡಲಾಗಿದೆ. ಅಟ್ಕಿನ್ಸನ್ ಹೊರಗುಳಿದಿರುವುದರಿಂದ. ತಂಡದಲ್ಲಿ ಕಾಣಿಸಿಕೊಂಡ ಸ್ಯಾಮ್ ಕುಕ್, ಬ್ರೈಡನ್ ಕಾರ್ಸೆ, ಜೇಮಿ ಓವರ್ಟನ್, ಜೋಶ್ ಟಂಗ್ ಮತ್ತು ಕ್ರಿಸ್ ವೋಕ್ಸ್ ಪೈಕಿ ಮೂವರು ವೇಗದ ಬೌಲರ್‌ಗಳನ್ನು ಆಡುವ ಬಳಗಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ.

ಎಂಟನೇ ಸ್ಥಾನದಲ್ಲಿ ಉತ್ತಮ ಬ್ಯಾಟಿಂಗ್ ಆಯ್ಕೆಯನ್ನು ನೀಡುತ್ತಿರುವುದರಿಂದ ವೋಕ್ಸ್ ಮತ್ತು ಒವರ್ಟನ್ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ನಡೆಯುವ ಸಾಧ್ಯತೆಯಿದೆ. ಜೂನ್ 6 (ಶುಕ್ರವಾರ) ರಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ವೋಕ್ಸ್ ಮತ್ತು ಜೋಶ್ ಟಂಗ್ ಭಾರತ ಎ ವಿರುದ್ಧ ಇಂಗ್ಲೆಂಡ್ ಲಯನ್ಸ್ ಪರ ಆಡಲಿದ್ದಾರೆ.

ಬೆನ್ ಸ್ಟೋಕ್ಸ್ ಬೌಲಿಂಗ್ ಮಾಡುತ್ತಾರಾ?
ಕಳೆದ ತಿಂಗಳು ಜಿಂಬಾಬ್ವೆ ವಿರುದ್ಧದ ಪಂದ್ಯಶ್ರೇಷ್ಠ ಪ್ರದರ್ಶನದ ನಂತರ ಶೋಯೆಬ್ ಬಶೀರ್ ಆಡುವ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಪ್ರಮುಖ ಸ್ಪಿನ್ನರ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ನಾಯಕ ಬೆನ್ ಸ್ಟೋಕ್ಸ್ ಕೂಡ ತಂಡದಲ್ಲಿ ನಾಲ್ಕನೇ ವೇಗದ ಬೌಲಿಂಗ್ ಆಯ್ಕೆಯಾಗಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅವರು ಜಿಂಬಾಬ್ವೆ ವಿರುದ್ಧ 11.2 ಓವರ್ ಬೌಲಿಂಗ್ ಮಾಡಿ ಮೂರು ವಿಕೆಟ್ ಕಬಳಿಸಿದ್ದರು. ಹೀಗಾಗಿ ಅವರು ಭಾರತ ವಿರುದ್ಧವೂ ಕೆಲವು ಓವರ್‌ ಬೌಲಿಂಗ್‌ ಮಾಡುವ ಸಾಧ್ಯುತೆ ಇದೆ.

ಇಂಗ್ಲೆಂಡ್‌ ತಂಡ
ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ