LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಹೆಚ್ಚಿದ ಇಸ್ಪೀಟ್ ದಂಧೆ ಮತ್ತು ಅಪರಾಧ ಕೃತ್ಯ : ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ

ಹುಳಿಯಾರು: ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳು ಮಿತಿಮೀರುತ್ತಿದ್ದು, ಪೊಲೀಸರ ವೈಫಲ್ಯದ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂತರಾಜು ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದ್ದು ಮೃತ ವ್ಯಕ್ತಿಗೆ ಅನಾರೋಗ್ಯ ಉಂಟಾದಾಗ ಪೊಲೀಸರು ಆಸ್ಪತ್ರೆಗೆ ದಾಖಲಿಸದೆ ಇರುವುದು ದೊಡ್ಡ ಅಪರಾಧ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಟೇಷನ್‍ನಲ್ಲಿ ಕರ್ತವ್ಯದಲ್ಲಿದ್ದ ಜವಾಬ್ದಾರಿಯುತ ಅಧಿಕಾರಿಗಳ ಮೇಲೆ ತಕ್ಷಣವೇ ಪ್ರಕರಣ ದಾಖಲಿಸಬೇಕು. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಹುಳಿಯಾರಿನಲ್ಲಿ ಮಾಡದೆ ತುಮಕೂರಿನಲ್ಲಿ ಇಬ್ಬರು ವೈದ್ಯರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ನಡೆಸಬೇಕು ಎಂದು ಒತ್ತಾಯಿಸಿದರು.
ಹುಳಿಯಾರು ಹೋಬಳಿಯಲ್ಲಿ ಇಸ್ಪೀಟ್ ದಂಧೆ ಅತಿಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣವೇ ಇದನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹುಳಿಯಾರು ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಂಜೆ 6 ಗಂಟೆಯ ನಂತರ ಬಸ್ಸಿನಿಂದ ಇಳಿದು ಹೋಗುವ ಮಹಿಳೆಯರ ಸರಗಳ್ಳತನ, ಕುರಿಗಳ್ಳತನ ಮತ್ತು ದರೋಡೆ ಪ್ರಕರಣಗಳು ರಾಜಾರೋಷವಾಗಿ ನಡೆಯುತ್ತಿವೆ. "ಯಾರೂ ಕೇಳುವವರಿಲ್ಲದಂತಾಗಿದೆ" ಎಂದು ಕೆಲ ಪ್ರಕರಣಗಳನ್ನು ವಿವರಿಸಿದರು.
ಒಂದು ವೇಳೆ ಎಸ್ಪಿಯವರು ಈ ಕೂಡಲೇ ಮಧ್ಯಪ್ರವೇಶಿಸಿ ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಮಾಧುಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ