LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Sports News

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತಕ್ಕೆ ಮೃತಪಟ್ಟ ಅಭಿಮಾನಿಗಳು : ದುರಂತ

 r c b ಅಭಿಮಾನಿಗಳ  ದುರಂತ !

ಬೆಂಗಳೂರು: 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL) ಟ್ರೋಪಿ ಎತ್ತಿಹಿಡಿದ ಸಂಭ್ರಮವನ್ನು ಬೆಂಗಳೂರಿನಲ್ಲಿ ಸರ್ಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು.

ಐಪಿಎಲ್ ಟ್ರೋಫಿ ಗೆದ್ದು ಬಂದ ಕಲಿಗಳನ್ನು ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಲ್ಲಿಸಿ ಸರ್ಕಾರದ ಪ್ರತಿನಿಧಿಗಳು ಹೂವಿನ ಹಾರಹಾಕುತ್ತಿದ್ದರೆ, ಅಲ್ಲಿಂದ ಕೂಗಳತೆ ದೂರದಲ್ಲೇ ಇರುವ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ಕಾಲ್ತುಳಿತದಿಂದಾಗಿ (Bangalore Stampede) ಆರ್​ಸಿಬಿ ಅಭಿಮಾನಿಗಳ ಮಾರಣಹೋಮವೇ ನಡೆದುಹೋಯಿತು.

ಮೃತಪಟ್ಟ ಅಭಿಮಾನಿಗಳ ಹೆಸರು

ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ.ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ ಹೀಗಿದೆ:

ಭೂಮಿಕ್, 20 ವರ್ಷ (ನೆಲಮಂಗಲ)

ಸಹನ 19 ವರ್ಷ (ಕೋಲಾರ)

ಪೂರ್ಣಚಂದ, 32 ವರ್ಷ (ಮಂಡ್ಯ)

ಚಿನ್ಮಯಿ, 19 ವರ್ಷ

ದಿವ್ಯಾಂಶಿ, 13 ವರ್ಷ

ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)

ದೇವಿ, 29 ವರ್ಷ

ಶಿವಲಿಂಗ್, 17 ವರ್ಷ

ಮನೋಜ್, 33 ವರ್ಷ (ತುಮಕೂರು)

ಅಕ್ಷತಾ, (ಮಂಗಳೂರು)

ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ

ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಗಾಯಾಳುಗಳ ವಿವರ: ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ (ವಿಕ್ರಂ ಆಸ್ಪತ್ರೆ)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ