LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಸೆಕ್ಷನ್ 144 ಜಾರಿ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣ ಮದ್ದೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ಆಗಿದೆ ಎಂದು ಹೇಳಲಾಗುತ್ತಿದೆ. ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.
ಮೆರವಣಿಗೆ ಮೂಲಕ ಗಣಪನನ್ನು ತರುವ ವೇಳೆ ಮಸೀದಿ ಮುಂದೆ ಹಾದುಹೋಗಬೇಕೆನ್ನುವಷ್ಟರಲ್ಲಿ, ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ.

ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.

ಸ್ಥಳಕ್ಕೆ ಮಂಡ್ಯ ಎಸ್‌ಪಿ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಇದೇ ರೀತಿ ಗಲಭೆ ನಡೆದಿತ್ತು. ನಿನ್ನೆಯ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬAಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದAತಿದೆ.

ಘಟನೆ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಪೇಟೆಯ ರಸ್ತೆಗಳಲ್ಲಿನ ಎಲ್ಲಾ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಸದ್ಯ ಮದ್ದೂರಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಸೋಮವಾರದಂದು ಕೂಡ ಮುಂದುವರಿಯಲಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ