LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸರ್ಕಾರಿ ನೌಕರರಿಗೆ ವೇತನ ಕೊಡಲಾಗದೇ ಪಾಪರ್‌ ಹಂತದಲ್ಲಿ ಸರ್ಕಾರ : ಆರ್.‌ ಅಶೋಕ್

ಸರ್ಕಾರಿ ನೌಕರರಿಗೆ ವೇತನ ಕೊಡಲಾಗದೇ ಪಾಪರ್‌ ಹಂತದಲ್ಲಿ ಸರ್ಕಾರ : ಆರ್.‌ ಅಶೋಕ್

ಬೆಂಗಳೂರು,ಜು.5: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಸಾರಿಗೆ ನೌಕರರಿಗೆ ವೇತನ ಕೊಡಲು ಸಾಧ್ಯವಾಗದ ಪಾಪರ್‌ ಹಂತಕ್ಕೆ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶವೇ ಕೋವಿಡ್‌ ವೇಳೆ ಆರ್ಥಿಕವಾಗಿ ತತ್ತರಿಸಿತ್ತು. ಅಂತ ಸಂದರ್ಭದಲ್ಲೂ ನಮ ಸರ್ಕಾರ ಸಾರಿಗೆ ನೌಕರರಿಗೆ ಸಂಕಷ್ಟದ ಸಂದರ್ಭದಲ್ಲೂ ಅರ್ಧ ವೇತನವನ್ನು ನೀಡಿತ್ತು. ಎಲ್ಲವೂ ಸರಿಯಾಗಿರುವಾಗ ಬೇಡಿಕೆ ಈಡೇರಿಸಲು ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು.

Ashok to apprise BJP central leadership of rebellion in party - The Hindu

ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಘೋಷಣೆ ಮಾಡಿಬಿಡಿ. ಆಗ ನಿಮನ್ನು ಯಾರೂ ಕೂಡ ಏನೂ ಕೇಳುವುದಿಲ್ಲ. ನೌಕರರ ಬೇಡಿಕೆ ಈಡೇರಿಸದಿದ್ದರೆ ಇದೊಂದು ನಾಗರಿಕ ಸರ್ಕಾರ ಎನ್ನಬೇಕೇ ಎಂದು ತರಾಟೆಗೆ ತೆಗೆದುಕೊಂಡರು.

ನಮ ಸರ್ಕಾರದ ಖಜಾನೆ ತುಂಬಿದೆ ಎಂದು ಬೊಬ್ಬೆ ಹೊಡೆಯುತ್ತೀರಿ. ನಾನು ಸಾರಿಗೆ ಮಂತ್ರಿಯಾಗಿದ್ದಾಗ ನೌಕರರ ಶೇ.15 ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದೆ. 4 ಲಕ್ಷ ಕೋಟಿಗೂ ಅಧಿಕ ಬಜೆಟ್‌ ಮಂಡನೆ ಮಾಡುವ ನಿಮಗೆ ಅವರ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತಿಲ್ಲವೇ? ಎಂದು ಹರಿಹಾಯ್ದರು.

ನೌಕರರು ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಯುತವಾಗಿದೆ. ಅದನ್ನು ಈಡೇರಿಸುವುದು ಸರ್ಕಾರದ ಕರ್ತವ್ಯ. ಅದನ್ನು ಬಿಟ್ಟು ಅವರ ಮೇಲೆ ಶಿಸ್ತು ಕ್ರಮದ ಬೆದರಿಕೆ ಹಾಕುವುದು ಸರಿಯಲ್ಲ. ಮೊದಲು ನಿದ್ರೆ ಮಾಡುವುದನ್ನು ಬಿಟ್ಟು ಸಮಸ್ಯೆ ಪರಿಹರಿಸಿ ಎಂದು ಒತ್ತಾಯಿಸಿದರು.

ನೌಕರರ ನ್ಯಾಯಯುತ ಬೇಡಿಕೆಗೆ ನಮ ಸಂಪೂರ್ಣವಾದ ಬೆಂಬಲ ಇದೆ. ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ. ಜನರಿಗೆ ನೀವು ಏಕೆ ಸಮಸ್ಯೆ ಕೊಡುತ್ತಿದ್ದೀರಿ? ಎಂದು ಅಶೋಕ್‌ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ