LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

72 ಸಾವಿರ ಉದ್ಯೋಗಕ್ಕೆ ಹಸಿರು ನಿಶಾನೆ!

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ 100 ದಿನಗಳ ಕಾರ್ಯಯೋಜನೆಯಡಿ ಘೋಷಿಸಿರುವ ಪ್ರಮುಖ ಯೋಜನೆಗಳ ಅನುμÁ್ಠನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಷ್ಟು ವೇಗ ನೀಡಿದ್ದು, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ, ನ.1ರಿಂದ ‘ನೇಗಿಲ ಯೋಗಿ’ ಸೇವೆ ಆರಂಭ, ‘ಉದ್ಯೋಗ ನಿಧಿ’ ಯೋಜನೆ ಜಾರಿ ಹಾಗೂ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ ತರಬೇತಿ ವಿಸ್ತರಣೆ ಸೇರಿದಂತೆ ಹಲವು ನಿರ್ಧಾರಗಳಿಗೆ ಆದ್ಯತೆ ನೀಡಲಾಗಿದೆ. ಗೃಹ ಕಚೇರಿ ‘ಕೃμÁ್ಣ’ದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕೃಷಿ, ತೋಟಗಾರಿಕೆ, ಜವಳಿ, ಸಕ್ಕರೆ, ಶಾಲಾ ಶಿಕ್ಷಣ, ಪಶುಸಂಗೋಪನೆ, ಗಣಿ ಮತ್ತು ಭೂವಿಜ್ಞಾನ, ಸಣ್ಣ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ, ಅರಣ್ಯ ಹಾಗೂ ಪರಿಸರ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಮುಖ್ಯಮಂತ್ರಿ ಪರಿಶೀಲಿಸಿದರು. 72 ಸಾವಿರ ಹುದ್ದೆಗಳಿಗೆ ನೇಮಕಾತಿ ರಾಜ್ಯದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪ್ರಶ್ನೆಪತ್ರಿಕೆ ಸಿದ್ಧಪಡಿಸುವುದರಿಂದ ಹಿಡಿದು ಲಿಖಿತ ಪರೀಕ್ಷೆ, ಸಂದರ್ಶನದವರೆಗೆ ಯಾವುದೇ ಲೋಪಕ್ಕೆ ಅವಕಾಶವಾಗದಂತೆ ವ್ಯವಸ್ಥೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಖಾಲಿ ಹುದ್ದೆಗಳ ಸಮಗ್ರ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಲ್ಲಿಸುವಂತೆ ನಿರ್ದೇಶಿಸಿದರು. 72 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಈಗಾಗಲೇ ಆದ್ಯತೆ ನೀಡಿರುವುದನ್ನು ಹಿಂದೆಯೂ ಮುಖ್ಯಮಂತ್ರಿ ಘೋಷಿಸಿದ್ದರು. ನ.1ರಿಂದ ‘ನೇಗಿಲ ಯೋಗಿ’ ಕೃಷಿ ಯಾಂತ್ರೀಕರಣಕ್ಕೆ ಉತ್ತೇಜನ ನೀಡುವ ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆಯಡಿ ಜೇ-ಫಾರಂ ಆ್ಯಪ್ ಸಿದ್ಧಗೊಂಡಿದ್ದು, ಈಗಾಗಲೇ ಸುಮಾರು 2.5 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದಾರೆ. ನವೆಂಬರ್ 1ರಿಂದ ಸೇವೆ ಆರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ತಲುಪಿಸುವುದರ ಜತೆಗೆ ಡ್ರೋನ್ ಹಾಗೂ ಉಪಗ್ರಹ ಆಧಾರಿತ ಬೆಳೆ ಅಂದಾಜು ಮತ್ತು ಡಿಜಿಟಲ್ ಬೆಳೆ ಸಮೀಕ್ಷೆಗೆ ಸಿದ್ಧತೆ ನಡೆಸುವಂತೆ ಸೂಚಿಸಿದರು. 2027ರ ಮಾರ್ಚ್ ಅಂತ್ಯದೊಳಗೆ 2 ಸಾವಿರ ರೈತರನ್ನು ರಫ್ತುದಾರರನ್ನಾಗಿ ಸಿದ್ಧಪಡಿಸುವ ಗುರಿ ಹೊಂದಲಾಗಿದೆ. ರೈತರಿಗೆ ರಫ್ತು, ಪ್ರಮಾಣೀಕರಣ, ವೈಜ್ಞಾನಿಕ ಸಂಸ್ಕರಣೆ ಮತ್ತು ಸಂಗ್ರಹಣೆ ಕುರಿತು ತರಬೇತಿ ನೀಡುವಂತೆ ಸೂಚಿಸಿದರು. ಪುμÉ್ಪೂೀದ್ಯಮ ಉತ್ತೇಜನಕ್ಕಾಗಿ ಕನಿಷ್ಠ ಐದು ಎಕರೆ ಜಾಗದಲ್ಲಿ ಮಾರುಕಟ್ಟೆ ಸ್ಥಾಪನೆಗೆ ಸ್ಥಳ ಗುರುತಿಸುವಂತೆ ನಿರ್ದೇಶಿಸಿದರು. 11 ಜಿಲ್ಲೆಗಳಲ್ಲಿ ‘ಉದ್ಯೋಗ ನಿಧಿ’ ಅತ್ಯಂತ ಹಿಂದುಳಿದ 11 ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ‘ಉದ್ಯೋಗ ನಿಧಿ’ ಯೋಜನೆಯ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಯೋಜನೆಯಡಿ ಹೊಸ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವ ಅರ್ಹ ಉದ್ಯೋಗದಾತರಿಗೆ ಪ್ರತಿ ಉದ್ಯೋಗಿಗೆ ತಿಂಗಳಿಗೆ 2,500ರಂತೆ ಎರಡು ವರ್ಷಗಳವರೆಗೆ ಪೆÇ್ರೀತ್ಸಾಹಧನ ನೀಡಲಾಗುತ್ತದೆ. ಯೋಜನೆಯಡಿ ಒಂದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ. ಶಾಲೆಗಳಲ್ಲಿ ಎಐ ತರಬೇತಿ ವಿಸ್ತರಣೆ ಸರ್ಕಾರಿ ಶಾಲೆಗಳ 9ನೇ ತರಗತಿಯಲ್ಲಿ ಆರಂಭಿಸಿರುವ ಕೃತಕ ಬುದ್ಧಿಮತ್ತೆ ತರಬೇತಿಯನ್ನು 6ನೇ ತರಗತಿಯಿಂದಲೇ ಆರಂಭಿಸುವ ಕುರಿತು ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಶಾಲೆಗಳಲ್ಲಿ ಎಐ ತರಬೇತಿ ನೀಡಲು ಗೂಗಲ್ ಸಂಸ್ಥೆ ಆಸಕ್ತಿ ತೋರಿದ್ದು, ಈ ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಜಾಗ ಗುರುತಿಸುವಂತೆ ಹಾಗೂ 956 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಗರ ಪ್ರದೇಶದ 941 ಶಾಲೆಗಳ 9ನೇ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಗತಿಪರ ರೈತರ ಹೊಲಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿದ್ದು, ಡಿಸೆಂಬರ್ ಒಳಗೆ ಅನುμÁ್ಠನಗೊಳಿಸುವಂತೆ ಸೂಚಿಸಿದರು. ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೂ ವೇಗ ನೀಡುವಂತೆ ನಿರ್ದೇಶಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿಯಲ್ಲಿ ಎಫ್‌ಐಆರ್‌–ಎಸ್‌ಐಆರ್‌ ಹಗ್ಗಜಗ್ಗಾಟ: ಬಿಜೆಪಿ ಪ್ರತಿಭಟನೆ ವೇಳೆ ಜಿಲ್ಲಾಧ್ಯಕ್ಷರಿಗೆ ಗಾಯದ ಆರೋಪಜನಮನ ಸೆಳೆದ ‘ಪಂಚಮವೇದ ಪ್ರೇಮದ ನಾದ’ಬಳ್ಳಾರಿ: ‘ಪಿ.ಎಂ. ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ' ನೋಂದಣಿ ಶಿಬಿರ‘ಸೇವಾಜ್ಯೋತಿ’ಗೆ ಬಿಜೆಪಿ ರಣಕಹಳೆ ಯಶಸ್ವಿಗೆ ಶಾಸಕ ಜನಾರ್ದನ್‍ರೆಡ್ಡಿ ಕರೆಜನರ ಮನೆ ಬಾಗಿಲಿಗೆ ಸೇವೆ ಒದಗಿಸುವುದು ಸರ್ಕಾರದ ಆಶಯ : ಎಸ್ ಮಧು ಬಂಗಾರಪ್ಪಬರದ ನಡುವೆ ರೈತರ ಸಂಕಷ್ಟದ ಅನಾವರಣ 72 ಸಾವಿರ ಉದ್ಯೋಗಕ್ಕೆ ಹಸಿರು ನಿಶಾನೆ!ಫಾರ್ಮ್-7 ಅಡಿಯಲ್ಲಿ 91,278 ಆಕ್ಷೇಪಣೆ ಸ್ವೀಕಾರ; ಒಂದೇ ಒಂದು ದೂರು ಆಧರಿಸಿ ಎಫ್‌ಐಆರ್ ದಾಖಲಾಗಿಲ್ಲಎನ್‌ಡಿಎ ಅಭ್ಯರ್ಥಿ ನಮೋಶಿ ಗೆಲುವು ಖಚಿತ ಬಿಜೆಪಿ-ಜೆಡಿಎಸ್ ಮುಖಂಡರ ವಿಶ್ವಾಸಮೈಸೂರು ದಸರಾ ಉದ್ಘಾಟಿಸಲು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ