LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

'ಬಿಗ್ ಬಾಸ್ ಕನ್ನಡ ಸೀಸನ್ 11' ರನ್ನು ಗೆದ್ದು ಬೀಗಿದ ಹನುಮಂತ

ಬೆಂಗಳೂರು: ‘ಬಿಗ್ ಬಾಸ್’ ಕನ್ನಡದ 11ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಹನುಮಂತ ಲಮಾಣಿ ಅವರು ವಿಜಯಶಾಲಿಯಾಗಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹನುಮಂತ ಹೊರಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹನುಮಂತ ವಿಜೇತರಾಗಿ ಹೊರಹೊಮ್ಮಿರುವುದು ಅಚ್ಚರಿ ಮೂಡಿಸಿದೆ. ಆನ್‍ಲೈನ್ ಮತದಾನದ ಮೂಲಕ ವೀಕ್ಷಕರಿಂದ 5.23 ಕೋಟಿ ಮತಗಳನ್ನು ಪಡೆದಿದ್ದ ಹನುಮಂತ, ಬಿಗ್ ಬಾಸ್ ರಿಯಾಲಿಟಿ ಶೋ ಇತಿಹಾಸದಲ್ಲಿಯೇ ಅತ್ಯಧಿಕ ಮತ ಪಡೆದ ಸ್ಪರ್ಧಿ ಎಂಬ ದಾಖಲೆ ಬರೆದಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಸುತ್ತಿನಲ್ಲಿ ನಿರೂಪಕರಾದ ನಟ ಸುದೀಪ್ ಅವರು ಹನುಮಂತ ಅವರ ಕೈ ಎತ್ತಿ ಹಿಡಿಯುವ ಮೂಲಕ ಗೆಲುವು ಘೋಷಿಸಿದರು.
ರಜತ್ 2ನೇ ರನ್ನರ್ ಅಪ್ ಆಗಿ ಹೊರಬಂದರು. ಅಂತಿಮವಾಗಿ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಅವರು ಹನುಮಂತ ಮತ್ತು ತ್ರಿವಿಕ್ರಮ್ ಅವರ ಕೈಗಳನ್ನು ಇಡಿದಿದ್ದರು. ಅಂತಿಮವಾಗಿ ಹನುಮಂತನ ಕೈ ಅನ್ನು ಎತ್ತುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರನ್ನು ಘೋಷಿಸಿದರು. ಬಿಗ್ ಬಾಸ್ ವಿಜೇತರಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.
ವೈಲ್ಡ್ ಕಾರ್ಡ್ ಪ್ರವೇಶ
ಕಲರ್ಸ್ ಕನ್ನಡ ವಾಹಿನಿಯಲ್ಲಿ 11ನೇ ಆವೃತ್ತಿಯ ಬಿಗ್‍ಬಾಸ್ ಆರಂಭಗೊಂಡಿದ್ದಾಗ, ಹೊಡೆದಾಟದ ಕಾರಣಕ್ಕೆ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಗೆ ಬಿದ್ದರು. ಇದೇ ವೇಳೆಯೇ ಹನುಮಂತ, ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ ಮನೆ ಪ್ರವೇಶಿಸಿದ್ದರು. ತಮ್ಮ ಸರಳತೆ, ಹಾಡುಗಾರಿಕೆ ಹಾಗೂ ಉತ್ತರ ಕರ್ನಾಟಕ ಶೈಲಿನ ಮಾತುಗಳ ಮೂಲಕವೇ ಹನುಮಂತ ಪ್ರಸಿದ್ಧಿ ಪಡೆದು ಈಗ ಜಯಶಾಲಿಯಾಗಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!