LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಕಮಲ್ ಹಾಸನ್ ಅನ್ನು ತರಾಟೆಗೆ ತೆಗೆದುಕೊಂಡ : high court

ಕನ್ನಡ : ಬಗ್ಗೆ ಮಾತನಾಡುವ ಮುಂಚೆ ಯೋಚನೆ ಮಾಡಿ ಮಾತಾಡಬೇಕು ಅಂತ ಬಹುಶಃ ಈಗ ಕಮಲ್ ಹಾಸನ್ ಅವರಿಗೆ ಅರ್ಥವಾಗಿರುತ್ತೆ .

ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.

ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು. ‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ, ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ರಾಜಕೀಯ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದಿದ್ದರು.

ಕಮಲ್​ ಹಾಸನ್​ : ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಹೇಳಿತ್ತು.
ಇಂದು ಹೈಕೋರ್ಟ್ ನಲ್ಲಿ ಕಮಲ್ ಹಾಸನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು. ಈ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್​. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ’ ಎಂದು ಖಡಾಖಂಡಿತವಾಗಿ ಹೇಳಿದರು.

ಇದಕ್ಕೆ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30ರವರೆಗೆ ಸಮಯಾವಕಾಶ ಕೋರಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ