LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ನಟ ಪ್ರಥಮ್‌ಗೆ ಕೊ* ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು : ನಾನು ಚಿತ್ರರಂಗವನ್ನ ತೊರೆಯುತ್ತಿದ್ದೇನೆ !

Actor Pratham: ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.

ಬೆಂಗಳೂರು: ನಟ ಪ್ರಥಮ್‌ಗೆ (Actor Pratham) ಕೊ* ಬೆದರಿಕೆ (murder threat) ಹಾಕಿದ ಆರೋಪ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಅಭಿಮಾನಿಗಳ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ನಟ ಪ್ರಥಮ್ ದೂರು ಆಧರಿಸಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. BNS u\s 351(2)(3), 352, 126(2) r\w3(5) ರಡಿ ಪ್ರಕರಣ ದಾಖಲಾಗಿದೆ. A1 ಬೇಕರಿ ರಘು, A2 ಯಶಸ್ವಿನಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹ* ಯತ್ನಿಸಿದ್ದು ಕೊ*  ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು. ಇದೀಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ದರ್ಶನ್‌ ಅಭಿಮಾನಿಗಳ ವಿರುದ್ಧದ ರಮ್ಯಾ ದೂರು ತನಿಖೆ ಸಿಸಿಬಿಗೆ

After Ramya, actor Pratham files complaint against Darshan's fans over threats - India Today

ಬೆಂಗಳೂರು: ನಟ ದರ್ಶನ್ (Actor darshan) ಅಭಿಮಾನಿಗಳ ವಿರುದ್ಧ ನಟಿ ರಮ್ಯಾ (Actress Ramya) ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್ ಸಿಂಗ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ಪ್ರಕರಣ ನೀಡಲಾಗಿದೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಉಸ್ತುವಾರಿಯಲ್ಲಿ ಡಿಸಿಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದರು.

ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದಾರೆ. ಅಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ. ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ನಿನ್ನೆ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ