LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ನಾನು ಕೆಎಮ್‌ಎಫ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ: ಭೀಮಾ ನಾಯ್ಕ್

ಹೊಸಪೇಟೆ: ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿಕೆ ಸುರೇಶ್‌ಗೆ ನೇರ ಸ್ಪರ್ಧೆ ನೀಡಲು ಸಿದ್ಧ ಎಂದು ಮಾಜಿ ಅಧ್ಯಕ್ಷ ಎಲ್.ಬಿ.ಪಿ.ಭೀಮಾ ನಾಯ್ಕ್ ಸುಳಿವು ನೀಡಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಕೂಡಾ ಒಬ್ಬ ಪ್ರಬಲ ಆಕಾಂಕ್ಷಿ ಎಂದು ತಿಳಿಸುವ ಮೂಲಕ ಭೀಮಾನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯ ಕೂತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ, ಆದರೆ ಇದರ ಕುರಿತು ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳುವ ಮೂಲಕ ಡಿ.ಕೆ ಸುರೇಶ್ ಗೆ ನೇರ ಸ್ಪರ್ಧೆ ಒಡ್ಡುವ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ‘ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ (ರಾಬಕೊವಿ) ಹಾಲು ಒಕ್ಕೂಟದ ಚುನಾವಣೆಯಲ್ಲಿ ನಾನು ಸಹ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲಿದ್ದೇನೆ. ಧಾರವಾಡ ಹೈಕೋರ್ಟ್ ಪೀಠ ಚುನಾವಣೆಗೆ ಇದ್ದ ತಡೆಯನ್ನು ತೆರವುಗೊಳಿಸಿರುವ ಕಾರಣ ಜುಲೈ ೧೦ರಂದು ಕೆಎಮ್‌ಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ’ ಎಂದಿದ್ದಾರೆ.
ಹಗರಿಬೊಮ್ಮನಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಪರಾಜಯಗೊಂಡಿರುವ ಭೀಮಾ ನಾಯ್ಕ್ ರಾಜಕಾರಣದಲ್ಲಿ ತಮ್ಮ ಪ್ರಾಬಲ್ಯ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆನಿಕೊಂಡಿರುವ ನಾಯಕ್ ಒಂದು ವೇಳೆ ಕೆಎಂಎಫ್ ಚುನಾವಣಾ ಕಣಕ್ಕೆ ಇಳಿದಿದ್ದೇ ಆದರೆ ಅದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ಅಧಿಕಾರ ಹಂಚಿಕೆಯ ಹೋರಾಟದ ವೇದಿಕೆಯಾಗಿ ಮಾರ್ಪಡಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ