LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಬಿಜೆಪಿ ಆಡಳಿತದಲ್ಲಿ ಹಣದುಬ್ಬರ ಇಳಿಕೆ

ಬಿಜೆಪಿ ಆಡಳಿತದಲ್ಲಿ ಹಣದುಬ್ಬರ ಇಳಿಕೆ 

ಯುಪಿಎ ಸರ್ಕಾರದಲ್ಲಿ ಶೇ 8.1; ಮೋದಿ ಸರ್ಕಾರದಲ್ಲಿ ಶೇ 5.1
ನವದೆಹಲಿ: ಚಿಲ್ಲರೆ ಮಾರುಕಟ್ಟೆಯ ಹಣದುಬ್ಬರವು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕನಿಷ್ಠ ಶೇ 2.1ರಷ್ಟು ದಾಖಲಿಸಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಹಣದುಬ್ಬರ ಪ್ರಮಾಣ ಶೇ 8.1ರಷ್ಟಿತ್ತು. ಮೋದಿ ಸರ್ಕಾರದ ಉತ್ತಮ ನಿರ್ವಹಣೆಯಿಂದ ಸರಾಸರಿ ಹಣದುಬ್ಬವು ಶೇ 5.1ಕ್ಕೆ ಕುಸಿದಿದೆ ಎಂದು ಬಿಜೆಪಿ ಮಂಗಳವಾರ ಹೇಳಿದೆ.

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊAಡಿದ್ದಾರೆ.

‘2012ರ ಜನವರಿಯಿಂದ 2014ರ ಏಪ್ರಿಲ್‌ವರೆಗೆ ಕೇಂದ್ರದಲ್ಲಿ ಯುಪಿಎ ಸರ್ಕಾರವಿತ್ತು. ಈ ಅವಧಿಯ 28 ತಿಂಗಳಲ್ಲಿ 22 ತಿಂಗಳ ಹಣದುಬ್ಬರವು ಶೇ 9ರಷ್ಟಿತ್ತು. ಇದು ನಿಜಕ್ಕೂ ಆಘಾತಕಾರಿ. ಈ ಅವಧಿಯಲ್ಲಿ ಕೆಲವೊಮ್ಮೆ ಎರಡಂಕಿ ದಾಟಿದ್ದೂ ಇದೆ’ ಎಂದಿದ್ದಾರೆ.

‘ಇದಕ್ಕೆ ತದ್ವಿರುದ್ಧವಾಗಿ ಮೋದಿ ಸರ್ಕಾರವು ಚಿಲ್ಲರೆ ಮಾರುಕಟ್ಟೆಯ ಹಣದುಬ್ಬರ ಪ್ರಮಾಣವನ್ನು ಶೇ 5ರೊಳಗೆ ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ಶೇ 8ರ ಮೇಲೆ ಹೋಗಲು ಎಂದೂ ಬಿಟ್ಟಿಲ್ಲ’ ಎಂದಿದ್ದಾರೆ.

‘ಯುಪಿಎ ಸರ್ಕಾರದ ಕೊನೆಯ ಮೂರು ವರ್ಷಗಳಲ್ಲಿ ಹಣದುಬ್ಬರವು ಶೇ 9.8ಕ್ಕೆ ಏರಿತ್ತು. ಜಗತ್ತಿನ ಹಣದುಬ್ಬರ ಪ್ರಮಾಣವು ಶೇ 4ರಿಂದ 5ರ ಆಸುಪಾಸಿನಲ್ಲಿದ್ದಾಗಲೂ ಭಾರತವು ದುಬಾರಿ ಬೆಲೆಗೆ ತತ್ತರಿಸಿತ್ತು’ ಎಂದು ಮಾಳವೀಯ ಹೇಳಿದ್ದಾರೆ.

ರಾಷ್ಟ್ರೀಯ ಅಂಕಿಸAಖ್ಯೆ ಕಚೇರಿ ಸೋಮವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಪ್ರತಿ ವರ್ಷದ ಹಣದುಬ್ಬರ ಪ್ರಮಾಣವನ್ನು ವಿವರಿಸಿದೆ. 2024ರ ಜೂನ್‌ನಿಂದ 2025ರ ಜೂನ್‌ವರೆಗೆ ಹಣದುಬ್ಬರವು 2.1ರಷ್ಟಿದೆ. ಇದು ಕಳೆದ ಆರು ವರ್ಷಗಳ ಕನಿಷ್ಠಕ್ಕೆ ಇಳಿದಿದೆ. ಮುಂಗಾರು ಆಧರಿಸಿ ಮಾರುಕಟ್ಟೆಗೆ ಪ್ರವೇಶಿಸುವ ಆಹಾರ ಪದಾರ್ಥ, ತರಕಾರಿ ಬೆಲೆ ಆಧರಿಸಿ ಚಿಲ್ಲರೆ ಹಣದುಬ್ಬರ ಪ್ರಮಾಣ ನಿರ್ಧರಿಸಲಾಗುತ್ತದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ