LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಐಪಿಎಲ್ 2025 : ಪ್ಲೇ ಆಫ್ ಹಾಗೂ ಫೈನಲ್ ವೇಳಾಪಟ್ಟಿ ಕಂಪ್ಲೀಟ್ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಇನ್ನು ನಾಲ್ಕು ಪಂದ್ಯಗಳು ಮಾತ್ರ ಬಾಕಿ ಇವೆ. ಲೀಗ್ ಹಂತದ ಕೊನೆಯ ಪಂದ್ಯದ ವರೆಗೂ ಅಂಕಪಟ್ಟಿಯಲ್ಲಿ ಹಾವು ಏಣಿ ಆಟ ನಡೆಯಿತು. ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ, ಎಲ್‌ಎಸ್‌ಜಿ ತಂಡವನ್ನು ಮಣಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದೆ. ಈ ಮೂಲಕ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ. 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಅಬ್ಬರಿಸಿದೆ. ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆಕ 227 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 18.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 230 ರನ್ ಸಿಡಿಸಿ ಅಬ್ಬರಿಸಿತು. ಈ ಗೆಲುವಿನ ಮೂಲಕ ಎರಡು ಅಂಕಗಳನ್ನು ಕಲೆ ಹಾಕಿದ ಆರ್‌ಸಿಬಿ 19 ಅಂಕಗಳೊAದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಮುಂಬೈ ತಂಡವನ್ನು ಸೋಲಿಸಿದ್ದ ಪಂಜಾಬ್ ಕಿಂಗ್ಸ್ 19 ಅಂಕಗಳೊAದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯಿತು. ಆರ್‌ಸಿಬಿ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ತವರಿನಾಚೆ ಆಡಿದ ಏಳು ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮೂಲಕ 19 ಅಂಕಗಳನ್ನು ಕಲೆ ಹಾಕಿದೆ. ರನ್ ರೇಟ್‌ನಲ್ಲಿ ಪಂಜಾಬ್‌ಗಿAತಲೂ ಆರ್‌ಸಿಬಿ ಕೊಂಚ ಹಿಂದೆ ಇದ್ದು, ಎರಡನೇ ಸ್ಥಾನ ಪಡೆದುಕೊಂಡಿದೆ.

ಕ್ವಾಲಿಫೈಯರ್ 1
ಅಂಕ ಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳನ್ನು ಪಡೆದ ತಂಡಗಳು ಕ್ವಾಲಿಫೈಯರ್ 1ರಲ್ಲಿ ಕಾದಾಟ ನಡೆಸಲಿವೆ. ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಚಂಢೀಗಢ್‌ನ ಮುಲ್ಲನ್‌ಪುರ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7,30 ಕ್ಕೆ ಶುರುವಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗುತ್ತದೆ.

ಎಲಿಮಿನೇಟರ್
ಐಪಿಎಲ್‌ನ ಅಂಕ ಪಟ್ಟಿಯಲ್ಲಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಕಾದಾಟ ನಡೆಸಲಿವೆ.
ಮೇ 30 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಲ್ಲನ್‌ಪುರ್ ಮೈದಾನದಲ್ಲೇ ನಡೆಯಲಿರುವ ಈ ಪಂದ್ಯವು ರಾತ್ರಿ 7,30 ಕ್ಕೆ ಆರಂಭವಾಗಲಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬಿದ್ದರೆ, ಗೆದ್ದ ತಂಡ ದ್ವಿತೀಯ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಲಿದೆ.

ಕ್ವಾಲಿಫೈಯರ್ 2
ಕ್ವಾಲಿಫೈಯರ್ 1ರಲ್ಲಿ ಸೋತಿರುವ ತಂಡ ಹಾಗೂ ಎಲಿಮಿನೇಟರ್ ನಲ್ಲಿ ಗೆದ್ದಿರುವ ತಂಡಗಳು ಕ್ವಾಲಿಫೈಯರ್ 2ರಲ್ಲಿ ಕಾದಾಟ ನಡೆಸಲಿವೆ. ಜೂನ್ 1 ರಂದು ಅಹದಾಬಾದ್‌ನಲ್ಲಿ ದ್ವಿತೀಯ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಫೈನಲ್ ಪಂದ್ಯ
ಇನ್ನು ಫೈನಲ್ ಪಂದ್ಯ ಜರುಗಲಿರುವುದು ಜೂನ್3 ರಂದು. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ರಾತ್ರಿ 7.30 ಕ್ಕೆ ಶುರುವಾಗಲಿರುವ ಈ ಪಂದ್ಯದೊAದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಕ್ಕೆ ತೆರೆ ಬೀಳಲಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ