E-PAPER
14 Nov 2026, 07:22:20 AM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ನೀರಾವರಿ ನಿಗಮದ ಅಕ್ರಮ ನೇಮಕಾತಿ, ನಿಯಮಬಾಹಿರ ಮುಂಬಡ್ತಿ ಕುರಿತ ವರದಿ ಸರ್ಕಾರದ ಪರಿಶೀಲನೆಯಲ್ಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕ ನೀರಾವರಿ ನಿಗಮದಲ್ಲಿ ಅಕ್ರಮ ನೇಮಕಾತಿ, ನಿಯಮಬಾಹಿರ ಮುಂಬಡ್ತಿ ಕುರಿತ ದೂರಿನ ಬಗ್ಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸಿರುವ ವರದಿಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಗೆ ತಿಳಿಸಿದ್ದಾರೆ.

ಜೆಡಿಎಸ್ ನ ಸಿ.ಬಿ. ಸುರೇಶ್ ಬಾಬು ಅವರು ನಿಯಮ 351 ರಡಿ ಮಾಡಿದ ಪ್ರಸ್ತಾವನೆಗೆ ಉತ್ತರಿಸಿರುವ ಅವರು, ನಿಯಮಬಾಹಿರವಾಗಿ ಸಿಬ್ಬಂದಿ ವೇತನ, ಭತ್ಯೆ ಮತ್ತಿತರೆ ಸೌಲತ್ತುಗಳನ್ನು ಪಡೆದಿರುವ ಬಗ್ಗೆ ಸಾರ್ವಜನಿಕ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದು, ಅವರಿಂದ ವರದಿ ಬಂದಿದೆ ಎಂದು ಹೇಳಿದ್ದಾರೆ.

ಸಿ.ಬಿ. ಸುರೇಶ್ ಬಾಬು ಅವರು ವಿಷಯ ಪ್ರಸ್ತಾಪಿಸಿ, ಕಡಿಮೆ ವಿದ್ಯಾರ್ಹತೆ ಹೊಂದಿರುವ ಸಿಬ್ಬಂದಿಯ ಪ್ರಮಾಣಪತ್ರಗಳನ್ನು ಪರಿಶೀಲಿಸದೇ 2007ರಲ್ಲಿ ಸಿಬ್ಬಂದಿಯ ಸೇವೆಯನ್ನು ಸಕ್ರಮಗೊಳಿಸಲಾಗಿದೆ. ನಿಗಮದಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳಿಲ್ಲದಿದ್ದರೂ ಹಲವಾರು ಸಿಬ್ಬಂದಿಗೆ ಮುಂಬಡ್ತಿ ನೀಡಲಾಗಿದೆ. ಈ ಪ್ರಕರಣ ಲೋಕಾಯುಕ್ತರ ಮುಂದಿದೆ. ಇಲಾಖಾ ಪರೀಕ್ಷೆ ತೇರ್ಗಡೆ ಹೊಂದಿಲ್ಲದವರಿಗೂ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ