LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಜಮೀರ್‌ ಅಹಮದ್‌ ಖಾನ್

ಬೆಂಗಳೂರು: ಬಡವರಿಗೆ ಮನೆ ಹಂಚಿಕೆ ಮಾಡಲು ಹಣ ಪಡೆದಿದ್ದೇನೆಂದು ಸಾಬೀತು ಮಾಡಿದರೆ ತಕ್ಷಣವೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಆರೋಪ ಮಾಡಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಕಿಡಿಕಾರಿದರು.

ನಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಆದರೆ, ನಮ್ಮ ಶಾಸಕರೇ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸುವುದಾಗಿ ತಿಳಿಸಿದರು.

ತನಿಖಾ ವರದಿ ನಂತರ ಒಂದು ವೇಳೆ ಯಾರಾದರೂ ತಪ್ಪು ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ನಾನು ಪಾಟೀಲರ ಬಳಿಯೂ ಮಾತನಾಡುತ್ತೇನೆ ಎಂದರು.

ನಾನಾಗಲೀ, ಅಧಿಕಾರಿಗಳಾಗಲೀ ಮನೆ ನೀಡಲು ಹಣ ಪಡೆದಿದ್ದಾರೆಂದು ಪಾಟೀಲ್ ಆರೋಪ ಮಾಡಿಲ್ಲ, ಅವರು, ಯಾರ ಹೆಸರೂ ಹೇಳಿಲ್ಲ, ಪಂಚಾಯತ್ ಮಟ್ಟದಲ್ಲಿ ಈ ದಂಧೆ ನಡೆದಿದೆ ಎಂದು ಮಾಹಿತಿ ಕೊಟ್ಟರೆ ಕ್ರಮ ಕೈಗೊಳ್ಳುತ್ತೇನೆ.

ನಾನು ಪ್ರವಾಸದಲ್ಲಿದ್ದ ಕಾರಣ ಇದಕ್ಕೆ ತಕ್ಷಣಕ್ಕೆ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲಆದರೆಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಎಲ್ಲಾ ಮಾಹಿತಿ ನೀಡಿದ್ದೇನೆಮೊದಲನೆಯದಾಗಿ ಮನೆಗಳ ಹಂಚಿಕೆ ಪಂಚಾಯತ್ಗೆ ಅಧಿಕಾರಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದೇ ಅಂತಿಮ.

ಈ ಬಗ್ಗೆ ನಮ್ಮ ಪಕ್ಷದ ಮತ್ತೊಬ್ಬ ಶಾಸಕ ಗೋಪಾಲಕೃಷ್ಣ ಅವರಿಗೆ ಪೂರ್ಣ ಮಾಹಿತಿ ಇಲ್ಲ, ಅರಿಯದೆ ನನ್ನ ರಾಜೀನಾಮೆ ಕೇಳಿದ್ದಾರೆ, ಪಂಚಾಯತ್ ಅಲ್ಲದೆ, ಸ್ಥಳೀಯ ಶಾಸಕರು ನೀಡುವ ಶಿಫಾರಸಿನ ಆಧಾರದ ಮೇಲೂ ಆಶ್ರಯ ಮತ್ತಿತರ ಯೋಜನೆಗಳ ಮನೆಗಳ ಹಂಚಿಕೆ ಆಗಲಿದೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ