E-PAPER
23 Nov 2026, 02:02:45 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ವಿಜಯೇಂದ್ರಗೆ ಜನಾರ್ಧನ ರೆಡ್ಡಿ ತಿರುಗೇಟು

ಕತ್ತಲಲ್ಲಿ ಅಡ್ಜಸ್ಟ್ ಮೆಂಟ್ ಮಾಡಿಕೊಳ್ಳುವ ರಾಜಕಾರಣಿಯಲ್ಲ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ ಬಿಜೆಪಿ ಶಾಸಕರು ಪಾಲ್ಗೊಂಡಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

 ಕೂಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಗೆ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತಿರುಗೇಟು ನೀಡಿದ್ದಾರೆ‌

ನವೆಂಬರ್ 19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ನೂತನ ಅಧಿಕೃತ ನಿವಾಸವಾದ ‘ಗಂಗಾ’ದಲ್ಲಿ ಗೃಹಪ್ರವೇಶದ ಅಂಗವಾಗಿ ಪಕ್ಷಾತೀತ ಔತಣಕೂಟವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಆಹ್ವಾನದ ಮೇರೆಗೆ ಗಾಲಿ ಜನಾರ್ದನ ರೆಡ್ಡಿ, ಎಸ್.ಆರ್. ವಿಶ್ವನಾಥ್, ಕೆ. ಗೋಪಾಲಯ್ಯ, ಎಂ. ಕೃಷ್ಣಪ್ಪ ಹಾಗೂ ಎಲ್.ಎ. ರವಿ ಸುಬ್ರಹ್ಮಣ್ಯ ಸೇರಿದಂತೆ ಹಲವು ಬಿಜೆಪಿ ಶಾಸಕರು ಹಾಜರಾಗಿದ್ದರು. ಆದರೆ, ‘ತಮ್ಮ ಪಕ್ಷದ ಶಾಸಕರು ಮುಖ್ಯಮಂತ್ರಿಗಳ ಔತಣಕೂಟದಲ್ಲಿ ಭಾಗಿಯಾಗಿರುವುದನ್ನು ವೈಯಕ್ತಿಕವಾಗಿ ಒಪ್ಪುವುದಿಲ್ಲ’ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದರು.

ವಿಜಯೇಂದ್ರ ಅವರ ಈ ಅಸಮಾಧಾನಕ್ಕೆ ಕೊಪ್ಪಳದ ಕಾರಟಗಿಯಲ್ಲಿ ಪ್ರತಿಕ್ರಿಯಿಸಿರುವ ಜನಾರ್ದನ ರೆಡ್ಡಿ, “ಮುಖ್ಯಮಂತ್ರಿಗಳ ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂಬ ನಿರ್ಧಾರವಿದ್ದರೆ ರಾಜ್ಯಾಧ್ಯಕ್ಷರು ಈ ಮೊದಲೇ ಸ್ಪಷ್ಟ ಸೂಚನೆ ನೀಡಬೇಕಿತ್ತು. ಮೊದಲೇ ತಿಳಿಸಿದ್ದರೆ ನಮ್ಮಲ್ಲಿ ಯಾರೂ ಆ ಕಾರ್ಯಕ್ರಮಕ್ಕೆ ಹೋಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

 “ತಾವು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಒಬ್ಬ ಶಾಸಕನಾಗಿ ಬಹಿರಂಗವಾಗಿಯೇ ಹೋಗಿದ್ದೇವೆಯೇ ಹೊರತು, ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ನಾವು ಬೇರೆಯವರಂತೆ ಹಿಂದಿನ ಬಾಗಿಲಿನಿಂದ ಅಥವಾ ಕತ್ತಲಲ್ಲಿ ಹೋಗಿ ಅಡ್ಜಸ್ಟ್‌ಮೆಂಟ್ ಮಾಡಿಕೊಂಡು ಬರುವ ರಾಜಕಾರಣಿಯಲ್ಲ, ಬದಲಾಗಿ ಎಲ್ಲವನ್ನೂ ನೇರವಾಗಿ ಮಾಡುವ ರಾಜಕಾರಣಿ” ಎಂದು ಖಾರವಾಗಿ ನುಡಿದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರಗೆ ಜನಾರ್ಧನ ರೆಡ್ಡಿ ತಿರುಗೇಟುಬಸವ ಮಂಟಪ’ ಕೃತಿಗೆ ಕುಂವೀ ತೀವ್ರ ವಿರೋಧ ಆರನೇ ದಿನಕ್ಕೆ ಕಾಲಿಟ್ಟಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ನೀರಿನ ಮಿತಬಳಕೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿಜಯೇಂದ್ರ ಸವಾಲುಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ 12 ಶಾಸಕರಿಗೆ ರಾಜಕೀಯ ಅಧಿಕಾರವಿಶ್ವಗುರು ಬಸವಣ್ಣಗೆ ಅಪಮಾನ: ದೇಶ ತೊರೆಯಲೆತ್ನಿಸಿದ ರವಿಹಂಜ್‌ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧನ15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಜನವರಿ 18 ರಿಂದ ಪರೀಕ್ಷೆ ಆರಂಭಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯನಗರಗಳ ಅಭಿವೃದ್ಧಿಗೆ ವಿಶೇಷ ಒತ್ತು: ರಸ್ತೆಗಳಿಗೆ ಹೊಸ ಗ್ರಿಡ್‌ ವ್ಯವಸ್ಥೆ - ಡಿ.ಕೆ. ಶಿವಕುಮಾರ್‌