LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ರಾಯಚೂರು:ರಾಜ್ಯದಲ್ಲಿ   ಮಳೆ ಇಲ್ಲದೇ ಭೀಕರ ಬರಗಾಲ ಆವರಿಸಿದ್ದು ರೈತರಿಗೆ ಪ್ರತಿ ಎಕರೆಗೆ 25ಸಾವಿರ ರೂಪಾಯಿ   
 ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು   ಎಂಬುದು  ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದ್ದರೂ ರೈತರಿಗೆ ಸಮರ್ಪಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆ ಮಾಡದ ಜೆಸ್ಕಾಂ ಇಲಾಖೆಯ ವಿರುದ್ದವೂ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ದ್ದೇಶಿಸಿ ಮಾತನಾಡಿದ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ವಿಫಲವಾಗಿ ದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ
ನಷ್ಟದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 2,500 ಪರಿಹಾರ ನೀಡುವುದಾಗಿ ಘೋಷಿಸಿರುವುದು ಖಂಡನೀಯ. ರೈತರು ಅನುಭವಿಸಿರುವ ನಷ್ಟಕ್ಕೆ ಈ ಮೊತ್ತ ಯಾವುದೇ ರೀತಿಯಲ್ಲೂ ಸಾಕಾಗುವುದಿಲ್ಲ, ಆದ್ದರಿಂದ ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ 150 ದಿನಗಳ ಕೆಲಸ ಒದಗಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ
ಅನುಕೂಲವಾಗುವಂತೆ ಸಮರ್ಪಕವಾಗಿ 12 ಗಂಟೆಗಳ ವಿದ್ಯುತ್ ಪೂರೈಕೆ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡಿರುವ ಉದಾಹರಣೆ ಇದೆ. ಅದೇ ಮಾದರಿಯಲ್ಲಿ ಕಾಂಗ್ರೆಸ್ ಸರ್ಕಾರವೂ ರೈತರ ಸಂಕಷ್ಟವನ್ನು ಪರಿಗಣಿಸಿ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಹೇಳಿದರು. 

ಬರ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೂಡಲೇ ಗೋಶಾಲೆಗಳನ್ನು ಆರಂಭಿಸಿ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ತುಂಗಭದ್ರ ಎಡದಂಡೆ ಕಾಲುವೆಯ ಕೊನೆಯ ಭಾಗದ ರೈತರಿಗೆ  ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು. ನೀರಿನ ಕೊರತೆಯಿಂದ ಬೆಳೆಗಳು ಹಾನಿಯಾಗದಂತೆ ಕಾಲುವೆ ಮೂಲಕ ಸಮರ್ಪಕ ನೀರು ಹರಿಸಬೇಕು. ಹತ್ತಿಗೆ ಪ್ರತಿ ಕ್ವಿಂಟಲ್‌ಗೆ 12 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಟ್ರಾಕ್ಟರ್ ಮೂಲಕ ಪ್ರತಿಭಟನಾ ರ್ಯಾಲಿ:ನಗರದಲ್ಲಿ ಟ್ರಾಕ್ಟರ್‌ಗಳ ಮೂಲಕ ಪ್ರತಿಭಟನಾ ರ್ಯಾಲಿ
 ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ರ್ಯಾಲಿ ಬಸವೇಶ್ವರ ವೃತ್ತದವರೆಗೆ ನಡೆಯಿತು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ವಿರುಪಾಕ್ಷಿ, ಮುಖಂಡರಾದ ಸಣ್ಣನರಸಿಂಹ ನಾಯಕ, ಎನ್. ಶಿವಶಂಕರ ವಕೀಲ, ಲಕ್ಷ್ಮೀಪತಿ ಗಾಣದಾಳ, ರಾಮನಗೌಡ ಏಗನೂರು, ಎಸ್. ರಾಜು, ಆದಿರಾಜ, ನಾಗರಾಜಗೌಡ, ಅಮರೇಶ ಪಾಟೀಲ್, ನರಸಪ್ಪ ಆಶಾಪುರ, ಯಲ್ಲಾರೆಡ್ಡಿ, ರಫಿ, ವಿಜಯಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಕಾ ್ಯಬಿನೆಟ್‍ನಲ್ಲಿ ಹಾಲಿನ ದರ ತೀರ್ಮಾನ!ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರಕುರುಗೋಡಿನಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಶಾಸಕ ರಾಘವೇಂದ್ರ ಹಿಟ್ನಾಳ್ 10 ಸಾವಿರ ಕೋಟಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ : ಗಣೇಶ್ ಹೊರತಟ್ನಾಳ್ ಸವಾಲ್8 ವರ್ಷದ ಬಾಲಕ: ಪೋಷಕರ ಪತ್ತೆಗೆ ಮನವಿ"ಪ್ರತಿ ಹೃದಯ ಬಡಿತವೂ ಮಹತ್ವದ್ದು” ಎಂಬ ಧ್ಯೇಯವಾಕ್ಯದೊಂದಿಗೆ ಇ.ಎಸ್.ಐ.ಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆಬಸವನ ಬಾಗೇವಾಡಿಯಲ್ಲಿ ಭೂಕಂಪನ