E-PAPER
14 Nov 2026, 07:22:42 AM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕನ್ನಡಿಗ ಕೆ ಎಲ್ ರಾಹುಲ್ ಶತಕ: ಇಂಗ್ಲೆಂಡ್ ಟೀಮ್ ಗೆ ಎಚ್ಚರಿಕೆ !

ಕನ್ನಡಿಗ ಕೆ ಎಲ್ ರಾಹುಲ್ ಶತಕ: ಇಂಗ್ಲೆಂಡ್ ಟೀಮ್ ಗೆ ಎಚ್ಚರಿಕೆ !

ಟೀಮ್ ಇಂಡಿಯಾ ಈಗ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಈ ಸರಣಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ 2025-27ರ ಅಡಿಯಲ್ಲಿ ನಡೆಯಲಿದೆ. ಈ ಸರಣಿಗೂ ಭಾರತ "ಎ" ತಂಡ ಇಂಗ್ಲೆಂಡ್ ಲಯನ್ಸ್ ವಿರುದ್ಧ ಅನಧಿಕೃತ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಉಭಯ ದೇಶಗಳ ನಡುವಣ ಎರಡನೇ ಅನಧಿಕೃತ ಟೆಸ್ಟ್‌ ಶುಕ್ರವಾರದಿಂದ ಆರಂಭವಾಗಿದೆ. ಈ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ಕೆಎಲ್ ರಾಹುಲ್ ಆಡುತ್ತಿದ್ದಾರೆ.

ಇಂಗ್ಲೆಂಡ್‌ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ "ಎ" ತಂಡ ಉತ್ತಮ ಆರಂಭವನ್ನು ಪಡೆಯುವಲ್ಲಿ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಯಶಸ್ವಿ ಜೈಸ್ವಾಲ್‌ (17) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಅಭಿಮನ್ಯು ಈಶ್ವರನ್‌ (11) ಸಹ ಬೇಗ ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು.

ಮೂರನೇ ವಿಕೆಟ್‌ಗೆ ಆರಂಭಿಕ ಕೆಎಲ್ ರಾಹುಲ್ ಹಾಗೂ ಕರುಣ್‌ ನಾಯರ್ ಅವರ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ತಂಡಕ್ಕೆ ನೆರವಾಯಿತು. ಆರಂಭದಲ್ಲಿ ಬಿದ್ದ ಎರಡು ವಿಕೆಟ್‌ಗಳಿಂದ ಚೇತರಿಕೆ ಕಾಣಲು ನೆರವಾಯಿತು. ಈ ಜೊಡಿ 139 ಎಸೆತಗಳಲ್ಲಿ 86 ರನ್‌ ಸಿಡಿಸಿತು. ಇನ್ನು ಮೊದಲ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ದ್ವಿಶತಕ ಬಾರಿಸಿ ಅಬ್ಬರಿಸಿದ್ದ ಕರುಣ್‌ ನಾಯರ್‍‌ 4 ಬೌಂಡರಿ ನೆರವಿನಿಂದ 40 ರನ್‌ ಸಿಡಿಸಿ ಔಟ್ ಆದರು.

ನಾಲ್ಕನೇ ವಿಕೆಟ್‌ಗೆ ಆರಂಭಿಕ ಕೆಎಲ್ ರಾಹುಲ್ ಹಾಗೂ ವಿಕೆಟ್‌ ಕೀಪರ್‍‌ ಬ್ಯಾಟರ್ ಧ್ರುವ್ ಜುರೇಲ್‌ ರನ್ ಕಲೆ ಹಾಕುವಲ್ಲಿ ಸಫಲರಾದರು. ಈ ಜೋಡಿ ಅಮೋಘ ಜೊತೆಯಾಟದ ನೆರವಿನಿಂದ ತಂಡ ಉತ್ತಮ ಮೊತ್ತದತ್ತ ದಾಪುಗಾಲು ಇಡುವಂತೆ ಮಾಡಿತು. ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ವಿಕೆಟ್‌ ಕೀಪರ್‍‌ ಧ್ರುವ್ ಜುರೇಲ್‌ ಎರಡನೇ ಪಂದ್ಯದಲ್ಲೂ ಸಮಯೋಚಿತ ಪ್ರದರ್ಶನ ಮುಂದುವರೆಸಿದರು. ಜುರೇಲ್‌ 87 ಎಸೆತಗಳಲ್ಲಿ 7 ಬೌಂಡರಿ ಸಹಾಯದಿಂದ 52 ರನ್‌ ಬಾರಿಸಿ ಮಿಂಚಿದರು.

ಕೆಎಲ್‌ ಶತಕ: ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್‌ ಆರಂಭಿಕರಾಗಿ ಕಣಕ್ಕೆ ಇಳಿದು ತಂಡಕ್ಕೆ ಆಧಾರವಾದರು. ಐಪಿಎಲ್‌ನಲ್ಲಿ ನೀಡಿದ್ದ ಅಬ್ಬರದ ಪ್ರದರ್ಶನವನ್ನು ಇಂಗ್ಲೆಂಡ್‌ನಲ್ಲೂ ಮುಂದುವರೆಸಿದರು. ಇಂಗ್ಲೆಂಡ್ ತಂಡದ ಬೌಲರ್‍‌ಗಳನ್ನು ಕಾಡಿದ ರಾಹುಲ್‌ ಟೀಮ್ ಇಂಡಿಯಾಕ್ಕೆ ನೆರವಾದರು. ಇವರು 168 ಎಸೆತಗಳನ್ನು ಎದುರಿಸಿ ಭರವಸೆ ಮೂಡಿಸಿದರು. ಈ ವೇಳೆ ರಾಹುಲ್ 15 ಬೌಂಡರಿ, 1 ಸಿಕ್ಸರ್ ಸಹಾಯದಿಂದ 116 ರನ್‌ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಇವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ "ಎ" ಉತ್ತಮ ಮೊತ್ತವನ್ನು ಕಲೆ ಹಾಕಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ