LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಕಮಲ್ ಹಾಸನ್ ಕ್ಷಮೆ ಕೇಳಿದರೆ ಮಾತ್ರ 'Thug Life' ಚಿತ್ರ ಬಿಡುಗಡೆಗೆ ಅವಕಾಶ : KFCC ಸ್ಪಷ್ಟನೆ

ನಟ ಕಮಲ್ ಹಾಸನ್ : ಮಾತಿನ ಬರದಲ್ಲಿ ತಪ್ಪು ಮಾಡಿದ್ರ ? ಅಥವಾ ಕನ್ನಡದ ಬಗ್ಗೆ ಟೀಕೆ ಮಾಡಿದ್ದಕ್ಕೆ ಇಷ್ಟೆಲ್ಲ ಸಂಕಷ್ಟ ಉಂಟಾಯಿತಾ !
ನಟ ಕಮಲ್ ಹಾಸನ್ ಕ್ಷಮೆಯಾಚಿಸದೇ ಹೋದರೆ 'ಥಗ್ ಲೈಫ್' ಚಿತ್ರ ರಾಜ್ಯದಲ್ಲಿ ಬಿಡುಗಡೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಸ್ಪಷ್ಟವಾಗಿ ಹೇಳಿದೆ.

ಸೋಮವಾರ ಕನ್ನಡ ಪರ ಸಂಘಟನೆಗಳ ಮನವಿ ಸ್ವೀಕರಿಸಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ' ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಚಿತ್ರರಂಗ ಮಾತ್ರವಲ್ಲದೆ, ಕನ್ನಡ ಪರ ಸಂಘಟನೆಗಳು ಹಾಗೂ ಎಲ್ಲಾ ಪಕ್ಷದ ನಾಯಕರೂ ಕಮಲ್‌ ಹಾಸನ್‌ ಮಾತನ್ನು ಖಂಡಿಸಿದ್ದಾರೆ. ಚಿತ್ರಮಂದಿರಗಳ ಮಾಲೀಕರು, ವಿತರಕರು ಬೇರೆ ಸಿನಿಮಾಗಳನ್ನು ಹಾಕಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಕ್ಷಮೆ ಕೇಳಿದರೂ ತಕ್ಷಣದಲ್ಲೇ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ದೂರು ನೀಡಿದವರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಮಲ್‌ ಹಾಸನ್‌ ದುಬೈನಲ್ಲಿದ್ದಾರೆ. ಮಂಗಳವಾರ(ಜೂನ್‌ 3) ಚೆನ್ನೈಗೆ ಮರಳುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ‘ಥಗ್‌ಲೈಫ್‌’ ಸಿನಿಮಾದ ವಿತರಕರು ಜೂನ್‌ 3ರ ಮಧ್ಯಾಹ್ನದವರೆಗೆ ಸಮಯ ಕೇಳಿದ್ದಾರೆ’ ಎಂದು ತಿಳಿಸಿದರು.

ನಿರ್ಮಾಪಕ ಸಾ.ರಾ.ಗೋವಿಂದು ಅವರು ಮಾತನಾಡಿ, ತಮಿಳುನಾಡು ಚಿತ್ರೋದ್ಯಮ ಕಮಲ್‌ ಹಾಸನ್‌ ಪರ ನಿಂತಿದೆ. ಆ ಕೆಲಸ ಇಲ್ಲಿ ಆಗಬೇಕು. ನಮ್ಮ ಕಲಾವಿದರ ಸಂಘಕ್ಕೆ ನಾಡಿನ ಬಗ್ಗೆ ಗೌರವ ಇದ್ದರೆ ಅವರೇ ಮುಂದೆ ಬರಬೇಕು. ಇದು ಎಲ್ಲರ ಕರ್ತವ್ಯ. ರಾಜ್ಯದ ಸ್ವಾಭಿಮಾನದ ಪ್ರಶ್ನೆ ಇದು. ಕಮಲ್‌ ಹಾಸನ್‌ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ತನ್ನ ಈ ನಿರ್ಧಾರದಲ್ಲಿ ವಾಣಿಜ್ಯ ಮಂಡಳಿ ಒಂದು ಹೆಜ್ಜೆಯೂ ಹಿಂದಕ್ಕೆ ಹೋಗಲ್ಲ. ಸಿನಿಮಾದ ಹಂಚಿಕೆದಾರರು ಒಬ್ಬ ಕನ್ನಡಿಗ. ಅವರಿಗೆ ಅನ್ಯಾಯ ಆಗಬಾರದು ಎನ್ನುವ ಉದ್ದೇಶದಿಂದ ಸಮಯ ನೀಡಿದ್ದೇವೆ. ಕಮಲ್‌ ಹಾಸನ್‌ಗಾಗಿ ನಾವು ಕಾಯುತ್ತಿಲ್ಲ ಎಂದು ಹೇಳಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ