LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಬಾಲ್ಯದ ಗೆಳತಿ ಜೊತೆ ಮಾದುವೆ ಆಗೋಕೆ ಕುಲ್ದೀಪ್ ಯಾದವ್ ರೆಡಿ : ಮುಗಿದೋಯ್ತು ನಿಶ್ಚಿತಾರ್ಥ !

 

ಬಾಲ್ಯದ ಗೆಳತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಸ್ಪಿನ್ನರ್ ಕುಲ್ದೀಪ್ ಯಾದವ್ !

Kuldeep Yadav Engagement ಟೀಂ ಇಂಡಿಯಾದ ರಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಇದೀಗ ಸಪ್ತಪದಿ ತುಳಿಯಲು ಸಜ್ಜಾಗುತ್ತಿದ್ದಾರೆ. ಎಲ್ಲರೂ ಐಪಿಎಲ್ ಫೈನಲ್ ಪಂದ್ಯದ ಗುಂಗಿನಲ್ಲಿದ್ದರೆ ಅವರು ತಮ್ಮ ಬಾಲ್ಯದ ಗೆಳತಿ ವಂಶಿಕಾ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಲಖನೌನಲ್ಲಿ ನಡೆದ ಈ ಸಮಾರಂಭದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಸೇರಿದಂತೆ ಹಲವು ಕ್ರಿಕೆಟಿಗರು ಭಾಗವಹಿಸಿದ್ದರು. ಮದುವೆ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಡದ 30ರ ಹರೆಯದ ಕುಲ್ದೀಪ್ ಅವರು ಇದೀಗ ನಿಶ್ಚಿತಾರ್ಥ ಮಾಡಿಕೊಂಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಹೈಲೈಟ್ಸ್‌:
ಬಾಲ್ಯದ ಗೆಳತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಸ್ಪಿನ್ನರ್ ಕುಲ್ದೀಪ್ ಯಾದವ್
ಲಖನೌ ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ರಿಂಕು ಸಿಂಗ್ ಸೇರಿ ಅನೇಕ ಕ್ರಿಕೆಟಿಗರು ಭಾಗಿ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ರಿಸ್ಟ್ ಸ್ಪಿನ್ನರ್

ಇನ್ನೇನು ಐಪಿಎಲ್ ಮುಗಿದು ಇಂಗ್ಲೆಂಡ್ ಪ್ರವಾಸಕ್ಕೆಹೊರಡಬೇಕು ಎನ್ನುವಷ್ಟರಲ್ಲೇ ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ವಿವಾಹ ನಿಶ್ಚಿತಾರ್ಥ ನೆರವೇರಿದೆ. ಲಖನೌನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಅವರು ತಮ್ಮ ಬಾಲ್ಯದ ಗೆಳತಿ ವಂಶಿಕಾ ಎಂಬವರ ಜೊತೆ ಉಂಗುರ ಬದಲಾಯಿಸಿಕೊಂಡಿದ್ದಾರೆ. ಐಪಿಎಲ್ ನ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಸೇರಿದಂತೆ ಅನೇಕ ಕ್ರಿಕೆಟಿಗರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇತ್ತೀಚೆಗಷ್ಟೇ ರಿಂಕು ಸಿಂಗ್ ಅವರು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದರ ಬೆನ್ನಲೇ ಈ ನಿಶ್ಚಿತಾರ್ಥ ನಡೆದಿದೆ.ಕುಲದೀಪ್ ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ಗೆ ತಲುಪುವಲ್ಲಿ ವಿಫಲವಾಯಿತು. ಕುಲದೀಪ್ ಯಾದವ್ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶೀಘ್ರದಲ್ಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸರಣಿಯು ಜೂನ್ 20 ರಿಂದ ಆಗಸ್ಟ್ 4 ರವರೆಗೆ ನಡೆಯಲಿದೆ. ಇದರ ನಂತರ, ಕುಲದೀಪ್ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಭಾಗವಾಗಿದ್ದ ಕುಲದೀಪ್, ಉತ್ತಮ ಪ್ರದರ್ಶನ ನೀಡಿದರು. ಆದರೆ, DC ತಂಡವು ಲೀಗ್ ಹಂತದಲ್ಲಿಯೇ ಹೊರಬಿದ್ದ ಕಾರಣ ಅವರ ಆಟ ಬೇಗನೆ ಮುಗಿಯಿತು.

ಯಾರು ಕುಲ್ದೀಪ್ ಮನದನ್ನೆ?
ಕುಲದೀಪ್ ಯಾದವ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಂಶಿಕಾ ಲಕ್ನೋದ ಶ್ಯಾಮ್ ನಗರದ ನಿವಾಸಿಯಾಗಿದ್ದಾರೆ. ಪ್ರಸ್ತುತ ಎಲ್‌ಐಸಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಾಲ್ಯದಿಂದಲೂ ಇವರಿಬ್ಬರ ಮಧ್ಯೆ ಇದ್ದ ಸ್ನೇಹ ಬಳಿಕ ನಿಕಟ ಒಡನಾಟದಿಂದಾಗಿ ಪ್ರೀತಿಗ ಬದಲಾಯಿತು. ಇದೀಗ ಗುರು ಹಿರಿಯರ ಒಪ್ಪಿಗೆ ಪಡೆದು ಅವರು ಜೀವನ ಸಂಗಾತಿಗಳಾಗುವ ನಿರ್ಧಾರಕ್ಕೆ ಬಂದಿದ್ದಾರೆಂದು ತಿಳಿದು ಬಂದಿದೆ. ಸದ್ಯಕ್ಕೆ ಅವರ ಮದುವೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಕುಲದೀಪ್ ಅವರು 2018 ರಲ್ಲಿ ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದೀಗ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ನಿವೃತ್ತಿ ಘೋಷಿಸಿರುವುದರಿಂದ ಇಂಗ್ಲೆಂಡ್ ವಿರುದ್ಧದ ಸರಣಿಗೆ ರವೀಂದ್ರ ಜಡೇಜಾ ನಂತರ ಎರಡನೇ ಆಯ್ಕೆಯ ಸ್ಪಿನ್ನರ್ ಆಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ. ಭಾರತ ತಂಡದ ಪರ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 22.16 ಸರಾಸರಿಯಲ್ಲಿ 56 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಅದೇ ರೀತಿ 113 ಏಕದಿನ ಪಂದ್ಯಗಳಿಂದ 26.44 ಸರಾಸರಿಯಲ್ಲಿ 181 ವಿಕೆಟ್ ಉರುಳಿಸಿದ್ದಾರೆ. 40 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ 14.07 ಸರಾಸರಿಯಲ್ಲಿ 69 ವಿಕೆಟ್ ಗಳಿಸಿದ್ದಾರೆ.

ಡಿಸಿ ತಂಡದ ಪರವಾಗಿ ಅತ್ಯಧಿಕ ವಿಕೆಟ್
ಇನ್ನು ಐಪಿಎಲ್ ನಲ್ಲಿ ಎರಡು ತಂಡಗಳ ಪರ 98 ಪಂದ್ಯಗಳನ್ನು ಆಡಿದ್ದು 102 ವಿಕೆಟ್ ಪಡೆದಿದ್ದಾರೆ. ಐಪಿಎಲ್ 2025 ರಲ್ಲಿ ಕುಲದೀಪ್ ಯಾದವ್ 14 ಪಂದ್ಯಗಳಲ್ಲಿ 15 ವಿಕೆಟ್ ಪಡೆದರು. ಅವರ ಎಕಾನಮಿ ರೇಟ್ 7.07 ಆಗಿತ್ತು. ಅವರು DC ತಂಡದ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರಾಗಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ