LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ಬಿಜೆಪಿಯವರು ತಮ ವಿರುದ್ಧ ಹಾರಾಡಿಚೀರಾಡಿಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರುತಾವು ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇವೆಮನಸತಿಆರ್ಎಸ್ಎಸ್ ಚಿಂತನೆಗಳಿಗೆ ಎದುರಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆಇಂತಹುದಕ್ಕೆಲ್ಲಾ ನಾವು ಜಗ್ಗುವುದಿಲ್ಲಎಷ್ಟೇ ಬೆದರಿಕೆ ಹಾಕಿದರೂ ತಮ ನಿಲುವುಗಳು ಬದಲಾಗುವುದಿಲ್ಲ ಎಂದರು.

ಮೂರು ಬಾರಿ ಸಚಿವನಾಗಿದ್ದೇನೆಇಷ್ಟು ವರ್ಷ ರಾಜಕೀಯ ಜೀವನದಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲನನ್ನ ವಿರುದ್ಧ ಆದಾಯ ತೆರಿಗೆಸಿಬಿಐಜಾರಿ ನಿರ್ದೇಶನಾಲಯ ಸೇರಿದಂತೆ ಯಾವುದೇ ಸಂಸ್ಥೆಗೆ ದೂರು ನೀಡಲಿಅಮಿತ್ ಶಾಪ್ರಧಾನಿ ಮೋದಿಯವರಿಗೂ ಹೇಳಲಿನಾವು ಯಾವುದಕ್ಕೂ ಹೆದರುವುದಿಲ್ಲತಮ ತಂದೆ ಮಲ್ಲಿಕಾರ್ಜುನ ಖರ್ಗೆ ಎಷ್ಟು ದೃಢವಾಗಿದ್ದರೋನಾನೂ ಕೂಡ ಹಾಗೆಯೇ ಇರುತ್ತೇನೆ ಎಂದು ಹೇಳಿದರು.

ನನ್ನ ಆಪ್ತ ಎಂದು ಹೇಳಿರುವ ವ್ಯಕ್ತಿಯಿಂದ ಕಿರುಕುಳವಾಗಿದೆ ಎಂದು ವ್ಯಕ್ತಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಮುಂದಿಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ರೀತಿಯ ಘಟನೆ ಆಗಿರಬಹುದುನಾನು ಇಲ್ಲ ಎಂದು ಹೇಳುತ್ತಿಲ್ಲಇದರ ತನಿಖೆಗೂ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲತನಿಖೆಯಾಗಲಿ ಎಂದೇ ನಾನು ಹೇಳುತ್ತಿದ್ದೇನೆಆದರೂ ನನ್ನ ವಿರುದ್ಧ ಅನಗತ್ಯವಾಗಿ ಟೀಕೆ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಾರ್ಕಿಕತೆ ಇಲ್ಲದೆ ಮಾತನಾಡುತ್ತಿದ್ದಾರೆಕಲಬುರಗಿ ರಿಪಬ್ಲಿಕ್ ಎಂದು ದೂರಿದ್ದಾರೆಕಲಬುರಗಿಯಲ್ಲಿ ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಶಾಸಕ ಯಾವ ಪಕ್ಷದವರು?, ಪಡಿತರ ಅಕ್ಕಿಮಕ್ಕಳ ಹಾಲು ಕದ್ದು 20ಕ್ಕೂ ಹೆಚ್ಚು ಪ್ರಕರಣಗಳಿಗೆ ಗುರಿಯಾಗಿರುವವರು ಯಾರು?, ಕಲಬುರಗಿಯಲ್ಲಿ ಹೆಚ್ಚು ಅಪರಾಧಗಳನ್ನು ಮಾಡಿದವರು ಯಾರುಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪ್ರಯೋಗಾಲಯದ ವರದಿ ಬಂದಿದೆಅದರ ಬಗ್ಗೆ ವಿಜಯೇಂದ್ರ ಏಕೆ ಮಾತನಾಡುತ್ತಿಲ್ಲಮುನಿರತ್ನಸಿ.ಟಿ.ರವಿ ಅವರ ಪ್ರಕರಣಗಳ ಬಗ್ಗೆ ಹಾಗೂ ಕೋವಿಡ್ ಹಗರಣದ ಬಗ್ಗೆ ಏಕೆ ಸತ್ಯಶೋಧನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಅನ್ವರ್ ಮಾನ್ಪಡಿಗೆ 150 ಕೋಟಿ ರೂನೀಡಲು ಆಮಿಷವೊಡ್ಡಿದ ಪ್ರಕರಣದ ಬಗ್ಗೆ ಉಸಿರೆತ್ತುವುದಿಲ್ಲಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯವರು ಹೇಳಿದ್ದೆಲ್ಲಾ ಸತ್ಯವಲ್ಲನನ್ನ ರಾಜೀನಾಮೆ ಕೇಳುವ ಮೊದಲು ದಾಖಲೆ ಕೊಡಿ ಎಂದು ಒತ್ತಾಯಿಸಿದರು.

ಆತಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಪತ್ರದಲ್ಲಿ ನನ್ನ ಹೆಸರಿದೆಯೇ?

 8 ಮಂದಿ ಆರೋಪಿಗಳಿದ್ದಾರೆಅದರಲ್ಲಿ ಪ್ರಿಯಾಂಕ ಖರ್ಗೆ ಎಂದು ನಮೂದಾಗಿದೆಯೇ?, ಅವರದೇ ಕಂಪನಿಯ 8 ಮಂದಿ ಹೆಸರಿದೆಇದರ ಬಗ್ಗೆ ಮೊದಲು ತನಿಖೆಯಾಗಲಿ ಎಂದರು.ಸಂತೋಷ್ ಪಾಟೀಲ್ ಆತಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ಹೆಸರನ್ನು ಸ್ಪಷ್ಟವಾಗಿ ನಮೂದಿಸಲಾಗಿತ್ತುಈಗ ಬಿಜೆಪಿಯವರು ಆರೋಪ ಮಾಡುತ್ತಿರುವ ಪ್ರಕರಣದಲ್ಲಿ ನನ್ನ ಹೆಸರಿಲ್ಲಗುತ್ತಿಗೆ ವ್ಯವಹಾರಕ್ಕೆ ಸಂಬಂಧಪಟ್ಟಂತೆ ನಾನಾ ರೀತಿಯ ಹೇಳಿಕೆಗಳುಗೊಂದಲಗಳಿವೆಅದರ ಬಗ್ಗೆ ತನಿಖೆಯಾಗಬೇಕು ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ