LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಉದ್ಘಾಟಿಸಿದ ಶಾಸಕ ಗಾಲಿ ಜನಾರ್ಧನ ರೆಡ್ಡಿ

ಸಂಡೂರು:ಇಂದು ಸಂಡೂರು ವಿಧಾನಸಭಾ ಕ್ಷೇತ್ರದ ಏಳುಬೆಂಚಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ "ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ - 2026" ರ ಸಂಡೂರು ನಗರ ಮತ್ತು ಗ್ರಾಮೀಣ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗದ ಉದ್ಘಾಟನೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತ, ಪಕ್ಷದ ಪಡೆದು ಬಂದ ಹಾದಿ ಹಾಗೂ ಸಂಘಟನೆಯಲ್ಲಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿ, "ಸಂಘಟನೆಯೇ ಶಕ್ತಿ, ಕಾರ್ಯಕರ್ತರೇ ನಮ್ಮ ಆಸ್ತಿ" ಎಂಬ ಧ್ಯೇಯದೊಂದಿಗೆ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕಾ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಾಳೇಕಾಯಿ, ಮಾಜಿ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾದ ವಿಕಾಸ್ ಪುತ್ತೂರು, ಉಪಾಧ್ಯಕ್ಷರುಗಳಾದ ಜಿ.ಟಿ ಪಂಪಾಪತಿ ಹಾಗೂ ಹುಡೇದ್ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡವಿ ಸ್ವಾಮಿ, ಜಿಸಿಬಿ ರಾಮಕೃಷ್ಣ, ತಿರುಮಲ, ಬಿ.ರಾಮಕೃಷ್ಣ, ಶರಣುಗೌಡ, ಕುಮಾರ್ ನಾಯಕ್ ಹಾಗೂ ಇನ್ನಿತರ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ