LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

‘ಸೇವಾಜ್ಯೋತಿ’ಗೆ ಬಿಜೆಪಿ ರಣಕಹಳೆ ಯಶಸ್ವಿಗೆ ಶಾಸಕ ಜನಾರ್ದನ್‍ರೆಡ್ಡಿ ಕರೆ

ಗಂಗಾವತಿ: ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ-2026 ಕ್ಕೆ ಮತ್ತಷ್ಟು ಸಂಘಟನಾ ಬಲ ತುಂಬುವ ನಿಟ್ಟಿನಲ್ಲಿ ಬಿಜೆಪಿ ಸಜ್ಜಾಗಿದೆ. ಅಭಿಯಾನದ ಅಂಗವಾಗಿ ಅಕ್ಟೋಬರ್ 7ರಂದು ಕೊಪ್ಪಳದಲ್ಲಿ ನಡೆಯಲಿ ರುವ ‘ಸೇವಾಜ್ಯೋತಿ’ ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಲು ಗಂಗಾವತಿ ತಾಲೂಕಿನ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಕರೆ ನೀಡಿದ್ದಾರೆ. ಗಂಗಾವತಿಯ ಬಿಜೆಪಿ ಕಚೇರಿಯಲ್ಲಿ ನಡೆದ ‘ಸೇವಾಜ್ಯೋತಿ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸ ಲಾಯಿತು. ತಾಲೂಕಿನಾದ್ಯಂತ ಅಭಿಯಾನದ ಸಂದೇಶ: ‘ಸೇವಾಜ್ಯೋತಿ’ ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತವಾಗದೆ, ಸೇವಾ ಸಂಕಲ್ಪ ಅಭಿಯಾನದ ಆಶಯವನ್ನು ಜನಸಾಮಾನ್ಯರಿಗೆ ತಲುಪಿಸುವ ವೇದಿಕೆಯಾಗಬೇಕು ಎಂಬ ನಿಟ್ಟಿ ನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಕರೆ ನೀಡಿದ್ದಾರೆ. ಗಂಗಾವತಿ ತಾಲೂಕಿನ ಪ್ರತಿಯೊಂದು ಗ್ರಾಮ, ವಾರ್ಡ್ ಹಾಗೂ ಬಿಜೆಪಿ ಸಂಘಟನೆಯ ವ್ಯಾಪ್ತಿಯಲ್ಲಿ ಕಾರ್ಯಕರ್ತರು ಜನರನ್ನು ಸಂಪರ್ಕಿಸಿ ಕಾರ್ಯಕ್ರಮದ ಉದ್ದೇಶ, ರೂಪುರೇμÉಗಳು ಹಾಗೂ ಸಾರ್ವಜನಿಕರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವ ಜನಿಕರು ಕೊಪ್ಪಳದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಬೂತ್ ಮಟ್ಟದ ಸಂಘಟನೆಗೆ ಒತ್ತು ಕಾರ್ಯಕ್ರಮದ ಯಶಸ್ಸಿಗೆ ಮಂಡಲ, ಮೋರ್ಚಾ ಹಾಗೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ‘ಸೇವಾಜ್ಯೋತಿ’ ಕಾರ್ಯಕ್ರಮಕ್ಕೆ ನಿರೀಕ್ಷಿತ ಯಶಸ್ಸು ತಂದುಕೊಡಬೇಕು ಎಂದು ಮುಖಂಡರು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳ್ಳಗಣ್ಣವರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ್, ಮಾಜಿ ಕಾಡಾ ಅಧ್ಯಕ್ಷ ಗೀರೆಗೌಡ, ಜಿಲ್ಲಾ ಉಪಾಧ್ಯಕ್ಷ ಮನೋಹರಗೌಡ ಹೆರೂರು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅರಿಕೇರಿ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ಮುಖಂಡರಾದ ವೀರೇಶ್ ಬಲಕುಂದಿ, ಮೌಲಸಾಬ್, ಚನ್ನಪ್ಪ ಮಳಗಿ, ಮಹಾಂತೇಶ್ ಸ್ವಾಮಿ, ದೀಪಕ್ ಬಾಂಟೀಯ, ಬಸವರಾಜ್, ವಿಶ್ವನಾಥ ಕೆಸರಹಟ್ಟಿ, ಮಲ್ಲಿಕಾರ್ಜುನ ಸ್ವಾಮಿ, ಮಂಜುನಾಥ ಗೊಂದಿ, ಗಂಗಾಧರ ಸ್ವಾಮಿ, ಷಣ್ಮುಖ ನಾಯಕ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಹಾಗೂ ಗ್ರಾಮೀಣ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಭಾರತಿ ಹಗಲೂರು, ಮಾಲಾ ನಾಯ್ಕ್, ವೆಂಕಟೇಶ್ ಜಬ್ಬಲಗುಡ್ಡ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರ ಕರೆ “ಗಂಗಾವತಿ ತಾಲೂಕಿನಾದ್ಯಂತ ‘ಸೇವಾಜ್ಯೋತಿ’ ಕಾರ್ಯಕ್ರಮದ ಮಾಹಿತಿ ಜನರಿಗೆ ತಲುಪಬೇಕು. ಕಾರ್ಯಕ್ರಮದ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕೊಪ್ಪಳದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿಯಲ್ಲಿ ಎಫ್‌ಐಆರ್‌–ಎಸ್‌ಐಆರ್‌ ಹಗ್ಗಜಗ್ಗಾಟ: ಬಿಜೆಪಿ ಪ್ರತಿಭಟನೆ ವೇಳೆ ಜಿಲ್ಲಾಧ್ಯಕ್ಷರಿಗೆ ಗಾಯದ ಆರೋಪಜನಮನ ಸೆಳೆದ ‘ಪಂಚಮವೇದ ಪ್ರೇಮದ ನಾದ’ಬಳ್ಳಾರಿ: ‘ಪಿ.ಎಂ. ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ' ನೋಂದಣಿ ಶಿಬಿರ‘ಸೇವಾಜ್ಯೋತಿ’ಗೆ ಬಿಜೆಪಿ ರಣಕಹಳೆ ಯಶಸ್ವಿಗೆ ಶಾಸಕ ಜನಾರ್ದನ್‍ರೆಡ್ಡಿ ಕರೆಜನರ ಮನೆ ಬಾಗಿಲಿಗೆ ಸೇವೆ ಒದಗಿಸುವುದು ಸರ್ಕಾರದ ಆಶಯ : ಎಸ್ ಮಧು ಬಂಗಾರಪ್ಪಬರದ ನಡುವೆ ರೈತರ ಸಂಕಷ್ಟದ ಅನಾವರಣ 72 ಸಾವಿರ ಉದ್ಯೋಗಕ್ಕೆ ಹಸಿರು ನಿಶಾನೆ!ಫಾರ್ಮ್-7 ಅಡಿಯಲ್ಲಿ 91,278 ಆಕ್ಷೇಪಣೆ ಸ್ವೀಕಾರ; ಒಂದೇ ಒಂದು ದೂರು ಆಧರಿಸಿ ಎಫ್‌ಐಆರ್ ದಾಖಲಾಗಿಲ್ಲಎನ್‌ಡಿಎ ಅಭ್ಯರ್ಥಿ ನಮೋಶಿ ಗೆಲುವು ಖಚಿತ ಬಿಜೆಪಿ-ಜೆಡಿಎಸ್ ಮುಖಂಡರ ವಿಶ್ವಾಸಮೈಸೂರು ದಸರಾ ಉದ್ಘಾಟಿಸಲು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ