LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News | Politics News

ದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆರೋಪ ಹಾಗೂ ಪ್ರತಿಪಕ್ಷಗಳ ತೀವ್ರ ರಾಜೀನಾಮೆ ಒತ್ತಾಯದ ನಡುವೆಯೇ ಸಚಿವ ಬಿ. ನಾಗೇಂದ್ರ ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬುಧವಾರ ರಾತ್ರಿ ದೆಹಲಿಗೆ ತೆರಳಿರುವ ನಾಗೇಂದ್ರ, ಸದ್ಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಈ ಭೇಟಿ ರಾಜೀನಾಮೆ ಕುರಿತ ಚರ್ಚೆಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ನಾಗೇಂದ್ರ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಿರಂತರವಾಗಿ ವಾಗ್ದಾಳಿ ನಡೆಸುತ್ತಿವೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಮಂಡಲದ ಒಳಗೂ ಹೊರಗೂ ಪ್ರತಿಭಟನೆಗಳು ತೀವ್ರಗೊಂಡಿವೆ.

ಇದರ ಬೆನ್ನಲ್ಲೇ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿದ್ದು, ನಾಗೇಂದ್ರ ಅವರು ಸಚಿವರಾಗಿ ಮುಂದುವರಿಯುವ ಕುರಿತು ಸರ್ಕಾರದಿಂದ ಸ್ಪಷ್ಟನೆ ಕೇಳಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯೂ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಿಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ನಾಗೇಂದ್ರ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದೇನೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಲು ಅವರು ತೆರಳಿದ್ದಾರೆಯೇ? ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ.

ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿ ಮಾಡಿ, ತಮ್ಮ ಮೇಲಿನ ಆರೋಪಗಳು, ವಾಲ್ಮೀಕಿ ನಿಗಮದ ಪ್ರಕರಣ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸುವ ಸಾಧ್ಯತೆಯಿದೆ.

ಹೈಕಮಾಂಡ್ ಮಟ್ಟದಲ್ಲಿ ನಡೆಯಲಿರುವ ಈ ಚರ್ಚೆಯ ಬಳಿಕ ನಾಗೇಂದ್ರ ಅವರ ರಾಜಕೀಯ ಭವಿಷ್ಯ ಯಾವ ದಿಕ್ಕು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ರಾಜೀನಾಮೆ ನೀಡುತ್ತಾರೆಯೇ? ಅಥವಾ ಹೈಕಮಾಂಡ್ ಬೆಂಬಲದೊಂದಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆಯೇ? ಎಂಬುದಕ್ಕೆ ದೆಹಲಿ ಭೇಟಿಯ ಬಳಿಕ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು