LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಬಳ್ಳಾರಿಯಲ್ಲಿ ಮಾದಕ ವಸ್ತು ಸೇವಕರ ವಿರುದ್ಧ ಪೊಲೀಸ್‌ರ ಭರ್ಜರಿ ಕಾರ್ಯಾಚರಣೆ; 174 ಮಂದಿ ವಶ, ನಾಲ್ವರಿಗೆ ಎನ್‌ಡಿಪಿಎಸ್ ಪ್ರಕರಣ

ಬಳ್ಳಾರಿ:ಮಾದಕ ವಸ್ತು ಸೇವನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಬಳ್ಳಾರಿ ಜಿಲ್ಲಾ ಪೊಲೀಸರು ಎರಡು ದಿನಗಳ ವಿಶೇಷ ಕಾರ್ಯಾಚರಣೆ ನಡೆಸಿ 174 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಜುಲೈ 10 ಮತ್ತು 11ರಂದು ನಗರ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರಸ್ತೆ ಬದಿ, ಉದ್ಯಾನವನಗಳು, ಶಾಲಾ ಮೈದಾನಗಳು, ನಗರದ ಹೊರವಲಯದ ಖಾಸಗಿ ಲೇಔಟ್‌ಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ ವಿವಿಧ ಪ್ರದೇಶಗಳಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸಿದರು.

ಈ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದ 174 ಮಂದಿಯ ಪೈಕಿ 111 ಮಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯ ವರದಿಯಲ್ಲಿ ನಾಲ್ವರು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಅವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಕ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ತಡೆಗಟ್ಟುವ ಉದ್ದೇಶದಿಂದ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ, ಮಾದಕ ವಸ್ತು ಬಳಕೆ ಅಥವಾ ಅನುಮಾನಾಸ್ಪದ ಚಲನವಲನ ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು