LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
International News

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಟ್ಟ ದಾಖಲೆ ನಿರ್ಮಿಸಿದ ಪಾಕಿಸ್ತಾನ್, ಇಂಗ್ಲೆಂಡ್… !

ಬೆಂಗಳೂರು: ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಪಂದ್ಯಗಳಿಗೆ ಮಾ.2ಕ್ಕೆ  ತೆರೆ ಬೀಳಲಿದೆ. ಈ ಪಂದ್ಯಕ್ಕೂ ಮುನ್ನವೇ ಆತಿಥೇಯ ಪಾಕಿಸ್ತಾನ್ ಹಾಗೂ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಅಂತ್ಯಗೊಳಿಸಿದೆ. ಅದು ಸಹ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ  ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆತಿಥೇಯ ದೇಶವೊಂದು ಒಂದೇ ಒಂದು ಪಂದ್ಯ ಗೆಲ್ಲದೆ ಟೂರ್ನಿಯನ್ನು ಅಂತ್ಯಗೊಳಿಸಿದೆ. ಈ ಬಾರಿಯ ಟೂರ್ನಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನ್ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋತರೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಮುಗ್ಗರಿಸಿದೆ. ಇನ್ನು ಬಾಂಗ್ಲಾದೇಶ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿಗೆ ಆತಿಥೇಯ ತಂಡವೊಂದು ಗೆಲುವು ದಾಖಲಿಸದೇ ಟೂರ್ನಿ ಅಂತ್ಯಗೊಳಿಸಿದ ಅತ್ಯಂತ ಕೆಟ್ಟ ದಾಖಲೆ ಪಾಕಿಸ್ತಾನ್ ಪಾಲಾಗಿದೆ.

ಮತ್ತೊಂದೆಡೆ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ತಂಡವು ಈ ಬಾರಿ ಗೆಲುವಿನ ಖಾತೆ ತೆರೆಯದೇ ಟೂರ್ನಿ ಅಂತ್ಯಗೊಳಿಸಿರುವುದು ವಿಶೇಷ. ಅಂದರೆ ಆಂಗ್ಲ ಪಡೆ ಆಡಿದ ಮೂರು ಪಂದ್ಯಗಳಲ್ಲೂ ಹೀನಾಯ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದ ಇಂಗ್ಲೆಂಡ್, ದ್ವಿತೀಯ ಮ್ಯಾಚ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಪರಾಜಯಗೊಂಡಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೌತ್ ಆಫ್ರಿಕಾ ಬಗ್ಗು ಬಡಿದಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಒಂದೇ ಗೆಲುವು ಕಾಣದೇ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಅಂತ್ಯಗೊಳಿಸಿದೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಒಂದಾಗಿ  ಗುರುತಿಸಿಕೊಂಡಿದ್ದ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳು ಒಂದೇ ಒಂದು ಗೆಲುವು ಕಾಣದೇ ಟೂರ್ನಿ ಯನ್ನು ಅಂತ್ಯಗೊಳಿಸಿದ್ದು ಮಾತ್ರ ವಿಪರ್ಯಾಸ ಎನ್ನಬಹುದು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ