ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಪ್ರಧಾನಿ Narendra Modi ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್‌ನ Narendra Modi Stadium ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು New Zealand national cricket team ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ Mitchell Santner ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಪರ Sanju Samson 89 ರನ್‌ಗಳ ಅದ್ಭುತ ಇನಿಂಗ್ಸ್ ಆಡಿದರು. Abhishek Sharma 52 ರನ್ ಗಳಿಸಿದರೆ, Ishan Kishan 54 ರನ್‌ಗಳ ಕೊಡುಗೆ ನೀಡಿದರು. ಈ ಮೂರು ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿತು.
256 ರನ್‌ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡ 72 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಮಾರಕ ದಾಳಿ ನಡೆಸಿದ Jasprit Bumrah 4 ವಿಕೆಟ್ ಕಬಳಿಸಿದರು. ಪರಿಣಾಮವಾಗಿ ನ್ಯೂಝಿಲೆಂಡ್ ತಂಡ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ತಂಡ 96 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.
ಭಾರತದ ಈ ಅಮೋಘ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾದ ಪ್ರದರ್ಶನವನ್ನು ಶ್ಲಾಘಿಸಿದರು.
“ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಒಗ್ಗಟ್ಟಿನ ಪ್ರತೀಕವಾಗಿದೆ. ಟೂರ್ನಿಯುದ್ದಕ್ಕೂ ಟೀಮ್ ಇಂಡಿಯಾ ಅತ್ಯುತ್ತಮ ಧೈರ್ಯ ಪ್ರದರ್ಶಿಸಿದೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ,” ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
ಇನ್ನೊಂದೆಡೆ ವಿರೋಧ ಪಕ್ಷದ ನಾಯಕ Rahul Gandhi ಕೂಡ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಮತ್ತು ಜಸ್‌ಪ್ರೀತ್ ಬುಮ್ರಾ ಅವರನ್ನು ವಿಶೇಷವಾಗಿ ಶ್ಲಾಘಿಸಿರುವ ಅವರು, “ಅದ್ಭುತ ಗೆಲುವಿನೊಂದಿಗೆ ತವರಿನಲ್ಲಿ ಟ್ರೋಫಿಯನ್ನು ಉಳಿಸಿಕೊಂಡು ಮತ್ತೊಮ್ಮೆ ಮರೆಯಲಾಗದ ಕ್ಷಣವನ್ನು ನೀಡಿದ ಟೀಮ್ ಇಂಡಿಯಾಗೆ ಅಭಿನಂದನೆಗಳು,” ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.