LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News | Politics News

ಎಸ್‍ಐಆರ್ ಸುತ್ತ ರಾಜಕೀಯ ರಣಕಹಳೆ

ಇಂದು ಎನ್‍ಡಿಎ ನಾಯಕರು,ರಾಜ್ಯ ಮುಖ್ಯ ಚುನಾವಣಾಧಿಕಾರಿ ಭೇಟಿ

ಬೆಂಗಳೂರು: ಭಾರತದ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌‍ಐಆರ್‌) ವಿಚಾರವು ರಾಜಕೀಯ ಪಕ್ಷಗಳ ನಡುವಿನ ಆರೋಪ- ಪ್ರತ್ಯಾರೋಪ ತಾರಕಕ್ಕೇರುವಂತೆ ಮಾಡಿದೆ.

ಅಲ್ಲದೆ, ಪರಸ್ಪರ ಆರೋಪಿಸಿ ಚುನಾವಣಾ ಆಯೋಗಕ್ಕೂ ದೂರುಗಳು ಸಲ್ಲಿಕೆಯಾಗಿವೆ. ಇದರ ಬೆನ್ನಲ್ಲೇ ಎನ್‌ಡಿಎ ನಾಯಕರು ಜಂಟಿಯಾಗಿ ಎಸ್‌‍ಐಆರ್‌ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದ ವಿರುದ್ಧ ನಾಳೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.

ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌. ಡಿ.ಕುಮಾರಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ಮೇಲನೆ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಸೇರಿದಂತೆ ಜೆಡಿಎಸ್‌‍ ಹಾಗೂ ಬಿಜೆಪಿ ನಾಯಕರ ನಿಯೋಗವು ನಾಳೆ ಮಧ್ಯಾಹ್ನ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ಅವರಿಗೆ ದೂರು ಸಲ್ಲಿಸಲಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಅವರ ಸಂಪುಟದ ಸಚಿವರು ಸಂಪುಟ ಸಭೆಯನ್ನೇ ಮುಂದೂಡಿ ಎಸ್‌‍ಐಆರ್‌ನಲ್ಲಿ ಕೆಲವು ಸಮುದಾಯದ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ್ದರು.

ಇದರ ಬೆನ್ನಲ್ಲೇ ಜೆಡಿಎಸ್‌‍ ಮತ್ತು ಬಿಜೆಪಿ ನಾಯಕರು ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಕಾಂಗ್ರೆಸ್‌‍ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ, ನಮೂನೆ-7ಅನ್ನು ಸಲ್ಲಿಸಿರುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವುದನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಅಶೋಕ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಎಸ್‌‍ಐಆರ್‌ ಪ್ರಕ್ರಿಯೆ ಆರಂಭಿಸಿದ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಕ್ಷದ ವತಿಯಿಂದ ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ಕೆಲವೊಂದು ಸಮುದಾಯದ ಮತದಾರರನ್ನು ಗುಂಪು ಗುಂಪಾಗಿ ಸೇರಿಸಿ ನಮೂನೆಗಳನ್ನು ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ನಾಯಕರು ಆಯೋಗಕ್ಕೆ ದೂರು ನೀಡಿದ್ದರು. ಜೊತೆಗೆ ಗುಂಪು ಸೇರಿಸಲು ಅವಕಾಶ ನೀಡಬಾರದು ಹಾಗೂ ಆ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಸ್‌‍ಐಆರ್‌ ವಿಚಾರದಲ್ಲಿ ಅನಗತ್ಯ ಆರೋಪ ಮಾಡುತ್ತಿದೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ನೀಡುತ್ತಿದೆ. ಗುಂಪು ಸೇರಿಸಿ ನಮೂನೆಗಳನ್ನು ವಿತರಿಸಿದ ಕಾಂಗ್ರೆಸ್‌‍ ಪಕ್ಷದ ಮುಖಂಡರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸುವಂತೆ ದೂರಿನಲ್ಲಿ ಆಯೋಗವನ್ನು ಕೋರುವ ಸಾಧ್ಯತೆಗಳಿವೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎನ್‌ಡಿಎ ಅಭ್ಯರ್ಥಿ ನಮೋಶಿ ಗೆಲುವು ಖಚಿತ ಬಿಜೆಪಿ-ಜೆಡಿಎಸ್ ಮುಖಂಡರ ವಿಶ್ವಾಸಮೈಸೂರು ದಸರಾ ಉದ್ಘಾಟಿಸಲು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನಅಂತರ್ಜಲ ಮರುಪೂರಣಕ್ಕೆ ಜಲಮೂಲಗಳ ಬಳಕೆ; ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ಸಣ್ಣ ನೀರಾವರಿ ಸಚಿವ ಡಾ. ಅಜಯ್ ಧರ್ಮಸಿಂಗ್ಎಸ್‍ಐಆರ್ ಸುತ್ತ ರಾಜಕೀಯ ರಣಕಹಳೆ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳ ತಂಡವು ರಾಜ್ಯಾದ್ಯಂತ ಪ್ರವಾಸಹಿರಿಯೂರಿಗೆ   ಬರ ವೀಕ್ಷಣೆಗೆ ರಾಜ್ಯ ಜೆಡಿಎಸ್ ಮುಖಂಡ  ನಿಖಿಲ್ ಆಗಮನಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಆಯೋಗದ ಮುಂದೆ ಧರಣಿಸಿಗ್ನಲ್‌ ಜಂಪ್‌ ಮಾಡಿದರೆ 5 ಸಾವಿರ ದಂಡ: ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನೆಗಿ ರದ್ದುಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತಇಂದು ಕಾ ್ಯಬಿನೆಟ್‍ನಲ್ಲಿ ಹಾಲಿನ ದರ ತೀರ್ಮಾನ!