LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸಂಪುಟ ಪುನರ್ ರಚನೆಗೆ ಒತ್ತಡ ತಂತ್ರ

ಬೆಂಗಳೂರು : ನಾಯಕತ್ವದ ಬದಲಾವಣೆಗೆ ಸಂಬಂಧಪಟ್ಟಂತೆ ಗೊಂದಲಗಳ ನಡುವೆಯೇ ಕಾಂಗ್ರೆಸ್‍ನ ಹಿರಿಯ ಶಾಸಕರು ಪ್ರತ್ಯೇಕ ಸಭೆ ನಡೆಸಿ ಸಚಿವ ಸಂಪುಟ ಪುನರ್ ರಚನೆಗೆ ಒತ್ತಡ ಹೇರಲು ಮುಂದಾಗಿದ್ದಾರೆ.
ಎರಡು, ಮೂರು ಬಾರಿಗಿಂತಲೂ ಹೆಚ್ಚಿನ ಅವಧಿಗೆ ಶಾಸಕರಾಗಿರುವವರು ಗುರುವಾರ ನಗರದ ಖಾಸಗಿ ಕ್ಲಬ್‍ನಲ್ಲಿ ಸಭೆ ಸೇರಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ 31 ಮಂದಿ ಮೊದಲ ಬಾರಿಗೆ ಆಯ್ಕೆಯಾದ ಶಾಸಕರು ಪಕ್ಷದ ವರಿಷ್ಠರಿಗೆ ಪತ್ರ ಬರೆದು ಸಚಿವ ಸಂಪುಟಪುನರ್ ರಚನೆಯ ವೇಳೆ ತಮಲ್ಲಿ 5 ಮಂದಿಯನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಅದರ ಬೆನ್ನಲ್ಲೇ ಹಿರಿಯ ಶಾಸಕರು ಪ್ರತ್ಯೇಕ ಸಭೆ ನಡೆಸಲಿದ್ದು ಸಂಪುಟ ಪುನರ್‍ರಚನೆ ಮತ್ತು
ತಮಗೆ ಅವಕಾಶ ಪಡೆದುಕೊಳ್ಳುವ ಬಗ್ಗೆ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲವೇ ಇನ್ನೂ ಬಗೆಹರಿದಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ನೀಡಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ಶಾಸಕರು, ಸಚಿವರು ಭಾಗವಹಿಸಿ ಒಗ್ಗಟ್ಟು ಪ್ರದರ್ಶನ ಮಾಡಿದರು.
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಅಲ್ಲಿ ನಾಯಕತ್ವದ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ, ಹಿರಿಯರು-ಕಿರಿಯರು ಆದ್ಯ ತೆ, ಬಜೆಟ್ ಕುರಿತ ಚರ್ಚೆ, ಅನುದಾನ ಹಂಚಿಕೆ, ಸಚಿವರ ಕಾರ್ಯವೈಖರಿ ಸೇರಿದಂತೆ ನಾನಾ ವಿಚಾರಗಳು ಚರ್ಚೆಯಾಗಲಿವೆ.
ಶಾಸಕಾಂಗ ಸಭೆ ನಡೆಯಲಿದ್ದು, ನಾಳೆ ಹಿರಿಯ ಶಾಸಕರು ಪ್ರತ್ಯೇಕ ಸಭೆಗೆ ಮುಂದಾಗಿರುವುದು ಬೆಳವಣಿಗೆಗಳ ಮೇಲೆ ತೀವ್ರ ನಿಗಾ ಇರಿಸುವಂತೆ ಮಾಡಿದೆ. ಈವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಣದ ಶಾಸಕರು ಪ್ರತ್ಯೆಕವಾಗಿ ಔತಣಕೂಟ ಆಯೋಜಿಸಿದ್ದರು. ಇದು ಬಣ ರಾಜಕೀಯವನ್ನು ಹೆಚ್ಚಾಗುವಂತೆ ಮಾಡಿತು. ಈ ಬಣಗಳ ಮೇಲಾಟಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರು ಸೊಪ್ಪು ಹಾಕಲಿಲ್ಲ. ಡಿ.ಕೆ.ಶಿವಕುಮಾರ್ ಅವರಂತೂ ನೇರವಾಗಿ ನನ್ನ ಪರವಾಗಿ ಯಾರೂ ಹೇಳಿಕೆಗಳನ್ನು ನೀಡುವ ಅಗತ್ಯ ಇಲ್ಲ ಎಂದು ನಿಷ್ಠೂರವಾಗಿ ಹೇಳಿದ್ದರು.
ನಿನ್ನೆ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸುವ ಸಂದೇಶದಲ್ಲಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರುವ ಹೊಣೆಗಾರಿಕೆ ನಮಿಬ್ಬರ ಮೇಲಿದೆ ಎಂದು ಹೇಳುವ ಮೂಲಕ ಸದ್ಯಕ್ಕೆ ಅಧಿಕಾರ ಬಿಟ್ಟುಕೊಡುವ ಲಕ್ಷಣಗಳಿಲ್ಲ ಎಂಬ ಪರೋಕ್ಷ ಸಂದೇಶ ಸಾರಿದ್ದಾರೆ.
ನಾಯಕತ್ವದ ಗೊಂದಲದ ನಡುವೆಯೇ ಹಿರಿಯ-ಕಿರಿಯ ಶಾಸಕರುಗಳು ಬಣಗಳ ಜಂಜಾಟ ಬದಿಗಿರಿಸಿ ತಮ ಅನುಕೂಲ ಸಿಂಧು ರಾಜಕಾರಣವನ್ನು ನೋಡಿಕೊಳ್ಳಲು ಮುಂದಾಗಿದ್ದಾರೆ. ಸಚಿವ ಸಂಪುಟ ಪುನರ್‍ರಚನೆಯಾದರೆ, ಅವಕಾಶ ಪಡೆಯಬೇಕೆಂದು ಕಿರಿಯರು ಪ್ರಯತ್ನಿಸುತ್ತಿರುವ ನಡುವೆಯೇ ಹಿರಿಯ ಶಾಸಕರು ಪಕ್ಷದಲ್ಲಿ ತಮ ಪಾತ್ರ ಏನು? ಎಂಬ ಪ್ರಶ್ನೆಗಳನ್ನು ಮುಂದಿಡಲು ತಯಾರಾಗುತ್ತಿದ್ದಾರೆ.
ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, ಲಕ್ಷ್ಮಣ ಸವದಿ, ಕೆ.ಎಮ್. ಶಿವಲಿಂಗೇಗೌಡ, ತನ್ವೀರ್ ಶೇಟ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಹಿರಿಯ ಶಾಸಕರು ಸಭೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ