LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಪತ್ನಿ ಆತ್ಮಹತ್ಯೆಗೆ ಯತ್ನ: ಪ್ರೊಬೇಷನರಿ PSI ಬಂಧನ

ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡನೇ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾ ನಿವಾಸಿಯಾಗಿರುವ ದೊರೆನಾಯ್ಕ್, ಮೊದಲು ತಮ್ಮದೇ ತಾಂಡಾದ ಯುವತಿಯನ್ನು ವಿವಾಹವಾಗಿದ್ದರು. ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಮತ್ತೊಬ್ಬ ಯುವತಿಯನ್ನು ಎರಡನೇ ವಿವಾಹವಾಗಿದ್ದರೆಂದು ತಿಳಿದುಬಂದಿದೆ.

ಇತ್ತೀಚೆಗೆ ಎರಡನೇ ಪತ್ನಿಯೊಂದಿಗೆ ಕೌಟುಂಬಿಕ ಕಲಹ ತೀವ್ರಗೊಂಡ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ