LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಕಬ್ಬು ಬೆಳೆಗಾರರ ಪ್ರತಿಭಟನೆ: ಮುಖ್ಯಮಂತ್ರಿಗಳಿಂದ ನಿರ್ಣಯ

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನೀಡಬೇಕು ಎಂದು ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದೆ. ಆಯಾ ಜಿಲ್ಲೆಗಳ ಬಹುತೇಕ ಎಲ್ಲ ತಾಲೂಕುಗಳಲ್ಲಿ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಿವೆ.

ರೈತರ ಹೋರಾಟದ ಬಗ್ಗೆ ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, "ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಬರಲಿದೆ. ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದ್ಧಾರೆ.

"ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಸಕ್ಕರೆ ಸಚಿವರು ಸೇರಿದಂತೆ ಆ ಭಾಗದ ಸಚಿವರು ಕೂಡ ಚರ್ಚೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಅಂತಿಮ ನಿರ್ಧಾರ ಕೈಗೊಂಡರೂ ಕೇಂದ್ರ ಸರ್ಕಾರವೇ ಕಬ್ಬಿನ ದರ ನಿಗದಿಪಡಿಸಬೇಕಿದೆ" ಎಂದರು.

"ಮೊದಲ ಬಾರಿಗೆ ಶಾಸಕರಾಗಿರುವ ಬಿ.ವೈ.ವಿಜಯೇಂದ್ರ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ಧಾರೆ. ಈ ಬಗ್ಗೆ ಅವರಿಗೆ ಮಾಹಿತಿ ಕೊರತೆ ಇದೆ. ಈ ಹಿಂದೆ ಆಡಳಿತ ನಡೆಸಿದ ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಆರ್.ಅಶೋಕ್ಗೆ ಗೊತ್ತಿಲ್ಲವೇ? ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಬ್ಬು ಬೆಳೆಗಾರರಿಗೆ ಎಷ್ಟು ಪರಿಹಾರ ಕೊಟ್ಟರು? ಎಂಬುದನ್ನು ಪ್ರಶ್ನಿಸಬೇಕಿದೆ" ಎಂದರು.

ಮೃತ ರೈತನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ಅವರ ಕುಟುಂಬಕ್ಕೆ ಸಚಿವರು 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ತೆರಳಿದ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 5 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಹೆಚ್ಚುವರಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ಆಶ್ವಾಸನೆ ನೀಡಿದರು.

ಮತಗಳ್ಳತನವಾಗಿದೆ ಎಂದು ಕೇಂದ್ರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಮತಗಳ್ಳತನವಾಗಿರುವುದು ಸತ್ಯವಲ್ಲವೇ? ಕೇಂದ್ರ ಚುನಾವಣಾ ಆಯೋಗವು ಹೊಸ ಪಟ್ಟಿ ಬಿಡುಗಡೆ ಮಾಡಲು ಹೊರಟಿದೆ. ಇದರರ್ಥ ಏನೋ ತಪ್ಪಾಗಿದೆ ಅಂಥಲ್ಲವೇ? ಇದರ ವಿರುದ್ಧ ಹೋರಾಟ ನಡೆಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತೇನೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ