LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

'ಸಿದ್ದು ವರ್ಸಸ್ ಡಿಕೆಶಿ' ಶೀತಲ ಸಮರ ದೆಹಲಿಗೆ

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಏಪ್ರಿಲ್ 12ರಿಂದ ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ಶಾಸಕರು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ದೆಹಲಿ ಭೇಟಿಯ ಹಿಂದಿನ ಅಸಲಿ ಅಜೆಂಡಾ ಏನು?
ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ನೇತೃತ್ವದಲ್ಲಿ ಸುಮಾರು 30 ರಿಂದ 35 ಶಾಸಕರ ತಂಡ ದೆಹಲಿಗೆ ತೆರಳುತ್ತಿದೆ. ಈ ಭೇಟಿಯ ಹಿಂದೆ ಪ್ರಮುಖವಾಗಿ ಮೂರು ಉದ್ದೇಶಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ
ಸಿದ್ದರಾಮಯ್ಯ ಪರ ಬ್ಯಾಟಿಂಗ್: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, "ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು" ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುವುದು ಈ ತಂಡದ ಮೊದಲ ಗುರಿ.
ಸಂಪುಟ ಪುನಾರಚನೆ ಲಾಬಿ: ಸಂಪುಟ ಪುನಾರಚನೆಗೆ ಹೈಕಮಾಂಡ್ ಹಸಿರು ನಿಶಾನೆ ತೋರುವ ಸಾಧ್ಯತೆಗಳಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಈ ಭೇಟಿಯನ್ನು ತಮ್ಮ 'ಅದೃಷ್ಟ ಪರೀಕ್ಷೆ'ಗೆ ಬಳಸಿಕೊಳ್ಳಲಿದ್ದಾರೆ.
ಉಪಚುನಾವಣೆ ನಂತರದ ರಕ್ಷಣೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳ ಫಲಿತಾಂಶ ಏನೇ ಬಂದರೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಧಕ್ಕೆ ಬರಬಾರದು ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸುವುದು ಇವರ ಉದ್ದೇಶವಾಗಿದೆ.
ಹೈಕಮಾಂಡ್ ಭೇಟಿ ಮತ್ತು ಸಮಯದ ಮಹತ್ವ
ಕೇರಳ ವಿಧಾನಸಭಾ ಚುನಾವಣೆ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿದ್ದು, ಅದರ ಬೆನ್ನಲ್ಲೇ ಎಐಸಿಸಿ ನಾಯಕರು ಲಭ್ಯವಿರುತ್ತಾರೆ. ಹೀಗಾಗಿ ಏಪ್ರಿಲ್ 12ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಲು ಸಿದ್ದು ಬಣ ಯೋಜನೆ ರೂಪಿಸಿದೆ.
ದೆಹಲಿಗೆ ತೆರಳಲಿರುವ ಪ್ರಮುಖ ಶಾಸಕರು
ಈ ತಂಡದಲ್ಲಿ ಹಿರಿಯ ನಾಯಕರು ಹಾಗೂ ಪ್ರಭಾವಿ ಶಾಸಕರ ದಂಡೇ ಇದೆ. ಟಿ.ಬಿ. ಜಯಚಂದ್ರ, ಲಕ್ಷ್ಮಣ್ ಸವದಿ, ಬಿ.ಆರ್. ಪಾಟೀಲ್, ರಾಜು ಕಾಗೆ, ಕೆ.ಎಂ. ಶಿವಲಿಂಗೇಗೌಡ, ಎ.ಆರ್. ಕೃಷ್ಣಮೂರ್ತಿ ಸೇರಿದಂತೆ ಹಲವು ಶಾಸಕರು ಈ ತಂಡದಲ್ಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಡಿಕೆಶಿ ಬಣದ ಮುಂದಿನ ನಡೆ ಏನು?
ಸಿದ್ದರಾಮಯ್ಯ ಬಣದ ಈ ನಡೆಯಲ್ಲಿ ಪ್ರತಿತಂತ್ರ ರೂಪಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು ಸಜ್ಜಾಗುತ್ತಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾಗಿರುವ ಶಾಸಕರಾದ ಬಸವರಾಜ ಶಿವಗಂಗಾ ನೇತೃತ್ವದ ತಂಡವೊAದು ಸಿಎಂ ಬದಲಾವಣೆ ವಿಚಾರವನ್ನು ಮುನ್ನೆಲೆಗೆ ತರಲು ಸಜ್ಜಾಗಿದೆ ಎನ್ನಲಾಗಿದೆ.
ಸಂಧಾನದ ಪ್ರಕಾರ ಅಧಿಕಾರ ಹಂಚಿಕೆಯಾಗಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಡಲು ಡಿ.ಕೆ. ಶಿವಕುಮಾರ್ ಕೂಡ ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಸಚಿವರ ಮತ್ತು ನಾಯಕರ ಪ್ರತಿಕ್ರಿಯೆ
ಇತ್ತೀಚೆಗಷ್ಟೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು "ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ" ಎಂದು ಹೇಳಿಕೆ ನೀಡಿದ್ದರು. ಇತ್ತ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿ, "ನಾಯಕತ್ವದ ಬಗ್ಗೆ ಹೈಕಮಾಂಡ್ ಮತ್ತು ಉಭಯ ನಾಯಕರು ನಿರ್ಧರಿಸುತ್ತಾರೆ. ಏಪ್ರಿಲ್ 9ರ ನಂತರದ ಬೆಳವಣಿಗೆಗಳು ಬಹಳ ಮುಖ್ಯವಾಗಿದ್ದು, ಅಲ್ಲಿಯವರೆಗೆ ಇತರರ ಮಾತುಗಳಿಗೆ ಮಹತ್ವವಿಲ್ಲ" ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ 'ಸಿದ್ದು ವರ್ಸಸ್ ಡಿಕೆಶಿ' ಬಣಗಳ ನಡುವಿನ ಶೀತಲ ಸಮರ ಈಗ ದೆಹಲಿಯ ಅಂಗಳಕ್ಕೆ ಶಿಫ್ಟ್ ಆಗಿದೆ. ಸಿದ್ದರಾಮಯ್ಯ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಮತ್ತು ಸಂಪುಟಕ್ಕೆ ಹೊಸಬರನ್ನು ಸೇರಿಸಿಕೊಳ್ಳಲು ಕವಡೆ ಹಾಕುತ್ತಿದ್ದರೆ, ಇತ್ತ ಡಿಕೆಶಿ ಬಣ ಬದಲಾವಣೆಯ ನಿರೀಕ್ಷೆಯಲ್ಲಿದೆ. ಏಪ್ರಿಲ್ 12ರ ದೆಹಲಿ ಭೇಟಿಯು ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗೆ ನಾಂದಿ ಹಾಡುತ್ತದೆಯೇ ಅಥವಾ ಯಥಾಸ್ಥಿತಿ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ