LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

“ವಿಜಯ್ ಸರ್ಕಾರ ರಚಿಸಲಿ”: ಮೈತ್ರಿ ಊಹಾಪೋಹಗಳಿಗೆ ಸ್ಟಾಲಿನ್ ಬ್ರೇಕ್!

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಡಿಎಂಕೆ–ಎಐಎಡಿಎಂಕೆ ಮೈತ್ರಿ ಊಹಾಪೋಹಗಳಿಗೆ ಡಿಎಂಕೆ ಅಧ್ಯಕ್ಷ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೆರೆ ಎಳೆದಿದ್ದಾರೆ. “ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸಲಿ, ಆರು ತಿಂಗಳು ನಾವು ಯಾವುದೇ ತೊಂದರೆ ಕೊಡೋದಿಲ್ಲ” ಎಂದು ಹೇಳುವ ಮೂಲಕ ಹೊಸ ರಾಜಕೀಯ ಸಂದೇಶ ರವಾನಿಸಿದ್ದಾರೆ.

ಪ್ರಮುಖ ಇಂಗ್ಲಿಷ್ ದೈನಿಕಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಟಾಲಿನ್, ರಾಜ್ಯದಲ್ಲಿ ಮತ್ತೊಮ್ಮೆ ಚುನಾವಣೆ ಅಥವಾ ಸಂವಿಧಾನಾತ್ಮಕ ಸಂಕಷ್ಟ ಉಂಟಾಗಬಾರದು ಎಂಬ ಕಾರಣಕ್ಕೆ ಟಿವಿಕೆ ಸರ್ಕಾರಕ್ಕೆ ಅವಕಾಶ ನೀಡಲು ಸಿದ್ಧವಿದ್ದೇವೆ ಎಂದು ತಿಳಿಸಿದ್ದಾರೆ.

“ಹೊಸ ಸರ್ಕಾರ ನಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಮುಂದುವರಿಸಬೇಕು. ಜೊತೆಗೆ ಟಿವಿಕೆ ತನ್ನ ಚುನಾವಣಾ ಘೋಷಣಾಪತ್ರದಲ್ಲಿನ ಭರವಸೆಗಳನ್ನು ಈಡೇರಿಸಬೇಕು” ಎಂದು ಅವರು ಹೇಳಿದ್ದಾರೆ.

ವಿಶೇಷವಾಗಿ ಶಾಲಾ ಮಕ್ಕಳ ಉಚಿತ ಬೆಳಗಿನ ಉಪಹಾರ ಯೋಜನೆ ಹಾಗೂ ‘ಕಲೈಞರ್ ಮಹಿಳಿರ್ ಉರಿಮೈ ತೊಗೈ’ ಯೋಜನೆಯನ್ನು ಮುಂದುವರಿಸಬೇಕು ಎಂದು ಸ್ಟಾಲಿನ್ ಒತ್ತಾಯಿಸಿದರು. ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ನೀಡುತ್ತಿರುವ ಮಾಸಿಕ ₹1,000 ಭತ್ಯೆ ಯೋಜನೆ ಜನರಿಗೆ ನೆರವಾಗಿದೆ ಎಂದರು.

ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುವ ವಿಜಯ್ ಅವರ ಭರವಸೆ ಕುರಿತು ಪ್ರತಿಕ್ರಿಯಿಸಿದ ಸ್ಟಾಲಿನ್, “ಅದು ಜಾರಿಗೆ ತರುವುದು ಕಷ್ಟ. ಕನಿಷ್ಠ ನಾವು ನೀಡಿದಂತೆ ₹1,000 ಆದರೂ ಮುಂದುವರಿಸಲಿ” ಎಂದು ವ್ಯಂಗ್ಯವಾಡಿದರು.

ತಮ್ಮ ಸರ್ಕಾರದ ಸಾಧನೆಗಳನ್ನು ಉಲ್ಲೇಖಿಸಿದ ಸ್ಟಾಲಿನ್, “2021ರ ಚುನಾವಣಾ ಘೋಷಣಾಪತ್ರದ 90 ಶೇಕಡಾ ಭರವಸೆಗಳನ್ನು ಈಡೇರಿಸಿದ್ದೇವೆ. ನೀಟ್ ರದ್ದತಿ ಸೇರಿದಂತೆ ಕೆಲವು ವಿಷಯಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದ ಕಾರಣ ಸಾಧ್ಯವಾಗಲಿಲ್ಲ” ಎಂದರು.

ಇನ್ನೂ ಮುಂದೆ ಮಾತನಾಡಿದ ಅವರು, “ನಾವು ಈಡೇರಿಸಬಹುದಾದ ಭರವಸೆಗಳನ್ನಷ್ಟೇ ನೀಡಿದ್ದೇವೆ. ಟಿವಿಕೆ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನ. ಪ್ರತೀ ಕುಟುಂಬಕ್ಕೆ ವರ್ಷಕ್ಕೆ ಆರು ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುವುದಾದರೆ ನಮಗೆ ಸಂತೋಷವೇ” ಎಂದು ಹೇಳಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕಪಕ್ಷವಾಗಿ ಹೊರಹೊಮ್ಮಿದರೂ, ಬಹುಮತಕ್ಕೆ ಅಗತ್ಯವಿದ್ದ ಸಂಖ್ಯೆಯಿಂದ 10 ಸ್ಥಾನ ಕಡಿಮೆಯಾಗಿದೆ.

ಕಾಂಗ್ರೆಸ್ ಬೆಂಬಲದ ಬಳಿಕ ಟಿವಿಕೆಗೆ ಇನ್ನೂ ಐದು ಸ್ಥಾನಗಳ ಬೆಂಬಲ ದೊರೆತಿದೆ. ಆದರೂ ಸರ್ಕಾರ ರಚಿಸಲು ಇನ್ನೂ ಐದು ಸ್ಥಾನಗಳ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಸಿಪಿಐ ಮತ್ತು ವಿಡುತಲೈ ಚಿರುಥೈಗಲ್ ಕಚ್ಚಿ ಪಕ್ಷಗಳ ಬೆಂಬಲಕ್ಕೂ ಟಿವಿಕೆ ಮನವಿ ಮಾಡಿದೆ.

ಸರ್ಕಾರ ರಚನೆಗೆ ಅವಕಾಶ ಕೇಳಲು ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದ ಟಿವಿಕೆ ನಾಯಕರಿಗೆ, “ಸಾಕಷ್ಟು ಸಂಖ್ಯಾಬಲದೊಂದಿಗೆ ಬನ್ನಿ” ಎಂದು ರಾಜ್ಯಪಾಲರು ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಎಂಕೆ–ಎಐಎಡಿಎಂಕೆ ಮೈತ್ರಿ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿತ್ತು.

ಈ ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನಗಳು, ಎಐಎಡಿಎಂಕೆ 47, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಎಂ 2 ಸ್ಥಾನಗಳನ್ನು ಗೆದ್ದಿವೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನ ಗಳಿಸಿವೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ