LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದಾಗುವ ಕಿರುಕುಳ ತಪ್ಪಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಜನಸಾಮಾನ್ಯರಿಗೆ ಮೈಕ್ರೋ ಫೈನಾನ್ಸ್  ಸಂಸ್ಥೆಯಿಂದಾಗುವ ಕಿರುಕುಳ ತಪ್ಪಿಸುವ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿತ್ತು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ತೀರ್ಮಾನಿಸಿದೆ.

ಮುಂದಿನ ಅಧಿವೇಶನದಲ್ಲಿ ಸುಗ್ರಿವಾಜ್ಞೆಗೆ ಕಾನೂನಿನ ಸ್ವರೂಪ ನೀಡುವ ಕುರಿತ ಸಾಧಕ ಮತ್ತು ಬಾಧಕಗಳ ಬಗ್ಗೆ ಸರ್ಕಾರ ಸಮಗ್ರವಾಗಿ ಚರ್ಚೆಗೆ ಅವಕಾಶ ಕಲ್ಪಿಸುವ ನಿರೀಕ್ಷೆ ಇದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ