LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದದ ನಡುವೆಯೂ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ರಾಜ್ಯದ ಹಿತಾಸಕ್ತಿಗಾಗಿ ಎಲ್ಲ ಪಕ್ಷಗಳೂ ಒಂದಾಗಿ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, "ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತ ಮುಖ್ಯ" ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

ಕಾವೇರಿ ವಿವಾದ ಕರ್ನಾಟಕಕ್ಕೆ ಹೊಸದೇನಲ್ಲ. ಈ ವಿಚಾರದೊಂದಿಗೆ ಬೆಳೆದಿದ್ದೇವೆ. ಆದರೆ ಈಗಿನ ಸಂದರ್ಭದಲ್ಲಿ ಕುಡಿಯುವ ನೀರಿನ ಭದ್ರತೆ ಮತ್ತು ರೈತರ ಹಿತವನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಈ ನಿಲುವಿಗೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಇದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಹೇಳಿದರು.

ಸಭೆಗೆ ಮುನ್ನವೇ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಕೇಂದ್ರದ ಮಟ್ಟದಲ್ಲೂ ರಾಜ್ಯದ ಪರವಾಗಿ ಧ್ವನಿ ಎತ್ತಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಕುಡಿಯುವ ನೀರಿನ ಭದ್ರತೆಗೆ ಸರ್ಕಾರದ ಒತ್ತು

ರಾಜ್ಯದ ಜಲಾಶಯಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೀರನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಾತುಕತೆಗೆ ಸಿದ್ಧತೆ ವ್ಯಕ್ತಪಡಿಸಿದ್ದರೂ, ರಾಜ್ಯದ ಪರಿಸ್ಥಿತಿ ಸ್ಪಷ್ಟವಾದ ಬಳಿಕವೇ ಚರ್ಚೆ ನಡೆಸೋಣ ಎಂದು ತಿಳಿಸಿರುವುದಾಗಿ ಹೇಳಿದರು.

ಇದೀಗ ಉತ್ತಮ ಮಳೆಯಾಗುತ್ತಿರುವುದು ಸಮಾಧಾನದ ಸಂಗತಿಯಾಗಿದ್ದು, ಪರಿಸ್ಥಿತಿ ಕ್ರಮೇಣ ಸುಧಾರಿಸುವ ಲಕ್ಷಣಗಳಿವೆ. ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿರುವ ಕಾರಣ ಹೆಚ್ಚುವರಿ ನೀರನ್ನು ತಡೆಹಿಡಿಯಲು ಸಾಧ್ಯವಿಲ್ಲ. ಹೀಗಾಗಿ ಸಹಜ ಹರಿವಿನ ನೀರು ಮಾತ್ರ ಮುಂದಕ್ಕೆ ಹರಿಯುತ್ತಿದ್ದು, ಕಾಲುವೆಗಳ ಮೂಲಕ ರೈತರಿಗೆ ಸಹ ಅನುಕೂಲವಾಗುತ್ತಿದೆ ಎಂದು ವಿವರಿಸಿದರು.

ಮೇಕೆದಾಟು ಯೋಜನೆಗೆ ಸರ್ವಪಕ್ಷಗಳ ಬೆಂಬಲ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಪ್ರಸ್ತುತ ಮಳೆಯಾಗುತ್ತಿದ್ದರೂ ಮುಂದಿನ ಬೇಸಿಗೆಯವರೆಗೆ ನೀರನ್ನು ಸಮರ್ಪಕವಾಗಿ ಸಂರಕ್ಷಿಸಬೇಕಿದ್ದು, ಮೇಕೆದಾಟು ಬಹುಉದ್ದೇಶ ಯೋಜನೆಯೇ ರಾಜ್ಯಕ್ಕೆ ಶಾಶ್ವತ ಪರಿಹಾರ ಎಂಬ ಅಭಿಪ್ರಾಯ ಹಲವು ನಾಯಕರಿಂದ ವ್ಯಕ್ತವಾಯಿತು.

ರಾಜಕೀಯ ನಾಯಕರ ಭಾರಿ ಸಮಾಗಮ

ಸರ್ವಪಕ್ಷ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯ ಸಚಿವರು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ದೇವೇಗೌಡರ ಪತ್ರದ ಮೂಲಕ ಬೆಂಬಲ

ಸಭೆಗೆ ಗೈರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ಹಾಗೂ ಅನಾರೋಗ್ಯದ ಕಾರಣ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ ಅವರು, "ರಾಜ್ಯದ ಹಿತ ಮತ್ತು ರೈತರ ಬದುಕಿನ ರಕ್ಷಣೆಗೆ ಸರ್ಕಾರ ಕೈಗೊಳ್ಳುವ ಎಲ್ಲ ಪ್ರಯತ್ನಗಳಿಗೆ ನನ್ನ ಬೆಂಬಲವಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!