LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ

ಮಂಗಳೂರು:ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದ್ದು, ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಭಾನುವಾರ ಬೆಂಗಳೂರು ಸಮೀಪದ ಹೊಸೂರು ಹಾಗೂ ಕೇರಳದ ಕೊಚ್ಚಿ ನಗರಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಸೋಮವಾರ ಪ್ರಕಟಣೆ ನೀಡಿದೆ.

ಬಂಧಿತರು ಯಾರು?

ಬಂಧಿತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸೀರ್ ಅಲಿಯಾಸ್ ನಾಸೀರ್ (41) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೌಷಾದ್ (32) ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶ ಪೊಲೀಸರಿಂದ ದೊರೆತ ಮಹತ್ವದ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಅಬ್ದುಲ್ ನಾಸೀರ್‌ನನ್ನು ಕೊಚ್ಚಿಯಿಂದ ಹಾಗೂ ನೌಷಾದ್‌ನನ್ನು ಹೊಸೂರಿನಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ.

ಇನ್ನೂ ಮೂವರು ಪರಾರಿ

ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಮತ್ತು ಬಂಧನಕ್ಕಾಗಿ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.

ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ

ಬಂಧಿತ ಇಬ್ಬರ ವಿರುದ್ಧ ಪ್ರಮುಖ ಆರೋಪಿಗಳಿಗೆ ಆಶ್ರಯ ಹಾಗೂ ಇತರೆ ನೆರವು ನೀಡಿದ ಆರೋಪದಡಿ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಇಬ್ಬರ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿಗೊಳಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ ₹4 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಎನ್‌ಐಎ ತಿಳಿಸಿದೆ.

2022ರಲ್ಲಿ ನಡೆದಿದ್ದ ಹತ್ಯೆ

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದರು.

ಪ್ರಕರಣದ ತನಿಖೆಯಲ್ಲಿ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಕಾರ್ಯಕರ್ತರು ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಉಳಿದ ಆರೋಪಿಗಳ ಬಂಧನಕ್ಕಾಗಿ ಎನ್‌ಐಎ ಬಹು ರಾಜ್ಯಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು