LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ಚಿತ್ರಮಂದಿರ ಸುಡುವ ಎಚ್ಚರಿಕೆ ನೀಡಿದ್ದರೂ 'ಥಗ್ ಲೈಫ್' ಪ್ರದರ್ಶನಕ್ಕೆ ಸಜ್ಜಾದ ಚಿತ್ರಮಂದಿರಗಳು

ಬೆಂಗಳೂರು:  ಕಮಲ್ ಹಾಸನ್ ನಟಿಸಿ, ನಿರ್ಮಿಸಿರುವ 'ಥಗ್ ಲೈಫ್' ತಮಿಳು, ಮಲಯಾಳಂ, ತೆಲುಗು ಭಾಷೆಗಳ ಚಲನಚಿತ್ರ ಮುಂದಿನ ವಾರ (ಜೂನ್ 5) ರಿಲೀಸ್ ಆಗಲಿದೆ.

ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿದ ಹೇಳಿಕೆಯೊಂದು ಭಾರೀ ವಿವಾದ ಸೃಷ್ಟಿಸಿದೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಕಮಲ್ ಹಾಸನ್ ಅವರು ಕ್ಷಮೆ ಕೇಳುವ ಮಾತೇ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕನ್ನಡ ವರ್ಷನ್ ಇಲ್ಲದ ಕಮಲ್ ಹಾಸನ್ ಅವರ 'ಥಗ್ ಲೈಫ್' ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರ ಸುಡುವ ಎಚ್ಚರಿಕೆಯನ್ನು ಕನ್ನಡ ಪರ ಸಂಘಟನೆಗಳು ನೀಡಿವೆ. ಈ ಉದ್ವಿಗ್ನ ವಾತಾವರಣದ ನಡುವೆಯೂ ಈ ಚಿತ್ರವನ್ನು ಪ್ರದರ್ಶನ ಮಾಡಲು ಕರ್ನಾಟಕದ ಕೆಲವು ಥಿಯೇಟರ್ಗಳು ಮುಂದಾಗಿವೆ.

‘ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಮಾತನಾಡಿದ್ದರು ಕಮಲ್ ಹಾಸನ್. ಇದನ್ನು ಗುರಿಯಾಗಿಸಿಕೊಂಡು ಕನ್ನಡಿಗರು ಅವರ ಮೇಲೆ ತಿರುಗಿ ಬಿದ್ದಿದ್ದಾರೆ. ಕನ್ನಡಕ್ಕೆ ಅವಮಾನ ಆಗಿದೆ ಎನ್ನುವ ಆರೋಪವನ್ನು ಅನೇಕರು ಮಾಡಿದ್ದಾರೆ. ಆದರೆ, ಪಟ್ಟು ಬಿಡದ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಬೆದರಿಕೆ ಹೆದರಲ್ಲ, ಕ್ಷಮೆ ಕೇಳಲ್ಲ’ ಎಂದಿದ್ದಾರೆ.

ಮೇ 30ರಂದು ಸುದ್ದಿಗೋಷ್ಠಿ ನಡೆಸಿದ ಕರವೇ ಅಧ್ಯಕ್ಷ ನಾರಾಯಣಗೌಡ, ಯಾವುದಾದರೂ ಚಿತ್ರಮಂದಿರಗಳು ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದಲ್ಲಿ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಕೆಲವರು ಈ ಸಾಹಸಕ್ಕೆ ಮುಂದಾಗುತ್ತಿದ್ದಾರೆ.

ಬೆಂಗಳೂರಿನ ಖ್ಯಾತ ಸಿಂಗಲ್ ಸ್ಕ್ರೀನ್ಗಳಲ್ಲಿ ಒಂದಾದ ‘ವಿಕ್ಟರಿ ಸಿನಿಮಾಸ್’ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಶೀಘ್ರವೇ ‘ಥಗ್ ಲೈಫ್’ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗುವುದು ಎಂದು ಹೇಳಿದೆ. ಇದು ಕನ್ನಡಿಗರನ್ನು ಕೆರಳಿಸಿದೆ.

‘ಥಗ್ ಲೈಫ್’ ಚಿತ್ರ ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಕನ್ನಡ ವರ್ಷನ್ ಇಲ್ಲ. ಈ ಚಿತ್ರವನ್ನು ಮಣಿರತ್ನಂ ಅವರು ನಿರ್ದೇಶನ ಮಾಡಿದ್ದಾರೆ. ಕಮಲ್ ಹಾಸನ್, ಸಿಂಬು, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯಾ ಲಕ್ಷ್ಮಿ, ಅಭಿರಾಮಿ ಬೋಸ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಅವರೇ ನಿರ್ಮಾಪಕರು ಆಗಿರುವುದರಿಂದ ಕರ್ನಾಟಕದಿಂದ ಆಗುವ ನಷ್ಟವನ್ನು ಭರಿಸಲು ಅವರು ಸಿದ್ಧರಿದ್ದಂತೆ ಕಂಡುಬರುತ್ತಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ