LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ವೇದಿಕೆ ಸಿದ್ಧವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂತಿಮ ಪಟ್ಟಿಗೆ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಅನುಮೋದಿಸಿದ ಸಚಿವರ ಪಟ್ಟಿ ತಲುಪಿದ್ದು, ಇಂದು ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.
ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಲ್ಲಿಸಿದ್ದ ಪ್ರತ್ಯೇಕ ಪಟ್ಟಿಗಳ ಕುರಿತು ಚರ್ಚೆ ನಡೆಸಲಾಗಿದೆ. ಪ್ರಾದೇಶಿಕ, ಜಾತಿ, ರಾಜಕೀಯ ಸಮತೋಲನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಅಂತಿಮ ಪಟ್ಟಿಗೆ ಮುದ್ರೆ ಒತ್ತಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ಸಂಪುಟ ವಿಸ್ತರಣೆಗೆ ಮುನ್ನ ಈ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ವಿಧಾನಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ. ಈಗಾಗಲೇ ಜೂನ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಎರಡನೇ ಹಂತದ ವಿಸ್ತರಣೆಯಲ್ಲಿ ಹಲವು ಹಿರಿಯ ಹಾಗೂ ಹೊಸ ಮುಖಗಳಿಗೆ ಅವಕಾಶ ದೊರೆಯುವ ನಿರೀಕ್ಷೆ ಮೂಡಿದೆ.

ಸಂಭಾವ್ಯ ಸಚಿವರ ಪಟ್ಟಿ
ಚೆಲುವರಾಯಸ್ವಾಮಿ
ಹೆಚ್.ಸಿ. ಬಾಲಕೃಷ್ಣ
ಜಮೀರ್ ಅಹ್ಮದ್ ಖಾನ್
ಲಕ್ಷ್ಮಣ ಸವದಿ
ಗಾಯತ್ರಿ ಶಾಂತೇಗೌಡ
ಮಧು ಬಂಗಾರಪ್ಪ
ಅಜಯ್ ಸಿಂಗ್
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ರಘುಮೂರ್ತಿ
ರಿಜ್ವಾನ್ ಅರ್ಷದ್
ಶಿವಲಿಂಗೇಗೌಡ
ಪುಟ್ಟರOಗಶೆಟ್ಟಿ
ಸOತೋಷ್ ಲಾಡ್
ನರೇಂದ್ರಸ್ವಾಮಿ
ಮOಕಾಳ ವೈದ್ಯ
ವಿಜಯಾನಂದ ಕಾಶಪ್ಪನವರ್
ಬಿ. ನಾಗೇಂದ್ರ
ಬಸವರಾಜ್ ರಾಯರೆಡ್ಡಿ

ಕೆ.ಎಸ್ ಬಸವಂತಪ್ಪ

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!