LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ವಿಜಯನಗರದಲ್ಲಿ ವರುಣನ ರೌದ್ರನರ್ತನ | ಮಳೆಗೆ ರೈತರ ಬದುಕು ಮೂರಾ ಬಟ್ಟೆ...!

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಸತತ ಮಳೆಯಿಂದ ಸಮಸ್ಯೆ ಅನುಭವಿಸುತ್ತಿರುವ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ, ಪಾಪಿನಾಯಕನ ಹಳ್ಳಿ ಭಾಗದ ರೈತರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಎಡವಟ್ಟು ಇನ್ನಷ್ಟು ಸಮಸ್ಯೆಯನ್ನು ಉಲ್ಬಣಗೊಳ್ಳುವಂತೆ ಮಾಡಿದೆ ಎನ್ನಬಹುದು.

ರಾಷ್ಟ್ರೀಯ ಹೆದ್ದಾರಿ 67 ರ ನಿರ್ಮಾಣದ ವೇಳೆ ಆಗಿರುವ ಎಡವಟ್ಟೇ ಈ ಭಾಗದ ರೈತರ ಪಾಲಿಗೆ ಶಾಪವಾಗಿದೆ ಎಂದು ಅನ್ನದಾತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹೆದ್ದಾರಿ ಪ್ರಾಧಿಕಾರ ಮಾಡಿರುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರೈತರ ಹೊಲಗಳಿಗೆ ಮಳೆ ನೀರು ನುಗ್ಗಿ ಜಲಾವೃತವಾಗಿರುವ ಕಾರಣ ಸುಮಾರು 50 ಎಕರೆಯಲ್ಲಿನ ಬೆಳೆ ನಷ್ಟವಾಗಿದೆ. ಇನ್ನೂ ಕೆಲವು ಹೊಲಗಳು ಬಿತ್ತನೆಗೆ ಸಿದ್ದವಾಗಬೇಕಾದ ಸಮಯದಲ್ಲಿ ನೀರು ನಿಂತು ಮುಂದಿನ ಕೃಷಿ ಚಟುವಟಿಕೆಗೆ ಅಡ್ಡಿಯಾಗಿ ರೈತರಿಗೆ ನಷ್ಟವುಂಟಾಗಿದೆ.

ರಾಷ್ಟಿçÃಯ ಹೆದ್ದಾರಿ ಕಾಮಗಾರಿಯಿಂದಾಗಿ ಎರಡು ಭಾಗವಾಗಿರುವ ಹೊಲಗಳ ಎಡಭಾಗದಿಂದ ಬಲಭಾಗಕ್ಕೆ ಕೃಷಿ ಚಟುವಟಿಕೆಗಳಿಗಾಗಿ ಓಡಾಡಲು ರೈತರಿಗೆ ಅನುಕೂಕ ಮಾಡಿಕೊಟ್ಟಿಲ್ಲದ ಹೆದ್ದಾರಿ ಪ್ರಾಧಿಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ರ‍್ಯಾಂಪ್ ಮಾಡಿಕೊಡುವಲ್ಲಿ ಎನ್‌ಹೆಚ್‌ಎ ವಿಫಲವಾಗಿದೆ.

ಇದರ ನಡುವೆ ಮಳೆ ಬಂದಾಗ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಶೆಟ್ಟಿಕೆರೆ ಹಳ್ಳಕ್ಕೆ ಹರಿದು ಹೋಗುತ್ತಿದ್ದ ಹೆಚ್ಚುವರಿ ಮಳೆನೀರು ಈಗ ಹೆದ್ದಾರಿ ಬದಿಯ ಹೊಲಗಳಿಗೆ ಹರಿದುಬರುತ್ತಿವೆ. ರಸ್ತೆಯ ವಿವಿಧ ಕಾಮಗಾರಿಗಳಿಂದಾಗಿ ಸ್ವಾಭಾವಿಕವಾಗಿ ಹಳ್ಳಕ್ಕೆ ಹರಿದುಹೋಗುತ್ತಿದ್ದ ನೀರು ಈಗ ಹೊಲಗಳಿಗೆ ನುಗ್ಗಿ ರೈತರಿಗೆ ವಿಪರೀತ ಸಮಸ್ಯೆ ಉಂಟುಮಾಡಿದೆ.

ಈ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟಿನಿಂದ ಸುಮಾರು ಐವತ್ತಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಭತ್ತ, ಈರುಳ್ಳಿ, ಮೆಕ್ಕೆಜೋಳ ಸೇರಿದಂತೆ ನಾನಾ ಬೆಳೆಗಳು ಜಲಾವೃತಗೊಂಡು ರೈತರಿಗೆ ಸಾಕಷ್ಟು ನಷ್ಟವನ್ನುಂಟುಮಾಡಿದೆ.
ಈ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯ ಕುರಿತು ಅನೇಕ ಬಾರಿ ರೈತರು ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತವಾಗಲಿ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವಾಗಲಿ ರೈತರ ಮನವಿಗೆ ಸ್ಪಂದಿಸಿ, ಈ ಸಮಸ್ಯೆಗೆ ತಿಲಾಂಜಲಿ ಇಡಬೇಕಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ