LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಮೋದಿ ಇಲ್ಲದಿದ್ರೆ ಈ ದೇಶ ಭಿಕ್ಷುಕರ ದೇಶವಾಗ್ತಿತ್ತು : ಶ್ರೀರಾಮುಲು !

ಮೋದಿ ಇಲ್ಲದಿದ್ರೆ ಈ ದೇಶ ಭಿಕ್ಷುಕರ ದೇಶವಾಗ್ತಿತ್ತು : ಶ್ರೀರಾಮುಲು !

ಬಳ್ಳಾರಿ :ನರೇಂದ್ರ ಮೋದಿ ಬಗ್ಗೆ ತುಂಬಾ ಉತ್ಸಾಹಕರಾಗಿ ಶ್ರೀ ರಾಮುಲು ಮಾತನಾಡುವ ಸಂದರ್ಭದಲ್ಲಿ ಮೋದಿ ಪ್ರಧಾನಿ ಆಗೋಕೂ ಮೊದಲು ಭಾರತ ಭಿಕ್ಷುಕ ದೇಶದಂತೆ ಇತ್ತು ಎನ್ನುವ ವಿವಾದಾತ್ಮಕ ಹೇಳಿಕೆ ಒಂದನ್ನ ಹೇಳಿದ್ದಾರೆ >
ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾಗುವುದಕ್ಕೂ ಮೊದಲು ಭಾರತ (India) ಭಿಕ್ಷುಕರ ದೇಶ ಆಗಿತ್ತು ಎಂದು ಮಾಜಿ ಸಚಿವ ಶ್ರೀರಾಮುಲು (Sriramulu) ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆ ಹನ್ನೊಂದು ವರ್ಷದ ಸಾಧನೆ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿ ಬರೋದಕ್ಕೂ ಮೊದಲು ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು. ಈಗ ಕಾಲ ಬದಲಾಗಿದೆ, ಇದೀಗ ಭಾರತವನ್ನು ವಿಶ್ವವೇ ನೋಡುವಂತೆ ಮಾಡಿದ್ದಾರೆ. ನೆಹರು ಅವರ ಕಾಲದಲ್ಲಿ ವೈಯಕ್ತಿಕ ಹಿತಾಸಕ್ತಿಗೆ ಕೆಲಸ ಮಾಡಿದ್ದರು. ದೇಶದ ಅಭಿವೃದ್ಧಿ ಬಗ್ಗೆ ನೆಹರು ಕುಟುಂಬ ಚಿಂತನೆ ಮಾಡಿಲ್ಲ. ವೈಯಕ್ತಿಕ ಅಭಿವೃದ್ಧಿ ಹೊಂದಿದ್ದ ಹೊರತು ದೇಶ ಅಭಿವೃದ್ಧಿ ಮಾಡಲಿಲ್ಲ. ಚೀನಾ-ಭಾರತದ ಯುದ್ಧದಲ್ಲಿ ಭಾರತ ಮಂಡಿಯೂರಿತು. ಇದಕ್ಕೆ ನೆಹರು ನಿಲುವು ಕಾರಣವಾಯಿತು. ನೆಹರು ಅವರ ಕಾಲಘಟ್ಟ ಕೆಟ್ಟದಾಗಿತ್ತು, ಸಾವಿರಾರು ಸೈನಿಕರು ಹುತಾತ್ಮರಾದರು ಎಂದು ನೆಹರು ಮತ್ತು ಇಂದಿರಾ ಗಾಂಧಿ ಕಾಲಘಟ್ಟದ ಭ್ರಷ್ಟಾಚಾರದ ವಿವರಣೆ ನೀಡಿದರು.

ಇಂದಿರಾಗಾಂಧಿ ಸರ್ವಾಧಿಕಾರಿ ಧೋರಣೆಯಿಂದ ಎಮರ್ಜೆನ್ಸಿ ಘೋಷಣೆ ಮಾಡಿದ್ದರು. ಕಮಿಷನ್ ಮಧ್ಯವರ್ತಿಗಳನ್ನು ಬೆಳೆಸೋದೇ ಗಾಂಧಿ ಕುಟುಂಬದ ಕೆಲಸ. ಭೋಫರ್ಸ್ ಹಗರಣದಲ್ಲಿ ಇನ್ನೂ ಮುಕ್ತರಾಗಿಲ್ಲ. ರಾಹುಲ್ ಸೋನಿಯಾ ಕೂಡ ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಜೈಲಿಗೆ ಹೋಗುತ್ತಾರೆ. ನ್ಯಾಷನಲ್ ಹೆರಾಲ್ಡ್ ದೊಡ್ಡ ಗೋಲ್‌ಮಾಲ್, ಪ್ರಕರಣದಲ್ಲಿ ಕರ್ನಾಟಕದ ನಾಯಕರು ಇದ್ದಾರೆ. ವಿಶ್ವದಲ್ಲಿ ಭಾರತಕ್ಕೆ ಗೌರವ ಸಿಗುವಂತೆ ಮಾಡಿದ್ದು ಮೋದಿ. 60 ವರ್ಷದ ಕಾಂಗ್ರೆಸ್ ಆಳ್ವಿಕೆಯಲ್ಲಿ ಭಾರತ ದುರ್ಬಲ ದೇಶವಾಗಿತ್ತು. ಯುಪಿಎ ಆಳ್ವಿಕೆಯಲ್ಲಿ ದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು ಎಂದು ಹರಿಹಾಯ್ದರು.

ಬಳ್ಳಾರಿ ಹತ್ತು ವರ್ಷದಲ್ಲಿ ಭಾರತ ಆರ್ಥಿಕವಾಗಿ ಪ್ರಬಲ ದೇಶವಾಗಿ ಬದಲಾಗಿದೆ. ವಿರೋಧ ಪಕ್ಷದಲ್ಲಿ ಕೂಡುವಷ್ಟು ಸ್ಥಾನವನ್ನು ಮಾತ್ರ ಕಾಂಗ್ರೆಸ್ ಲೋಕಸಭೆಯಲ್ಲಿ ಗಳಿಸಿದೆ. ಕಾಂಗ್ರೆಸ್ ಆಳ್ವಿಕೆಯ ರಾಜ್ಯದಲ್ಲಿ ಕ್ರೈಂ ಪ್ರಕರಣ ಹೆಚ್ಚಾಗಿವೆ. ದೇಶದಲ್ಲಿ ಹೆಚ್ಚು ವಿಮಾನ ನಿಲ್ದಾಣ ಸ್ಥಾಪನೆ, ರೈಲ್ವೆ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹೆಚ್ಚಾಗಿ ನಿರ್ಮಾಣವಾಗಿವೆ. 370 ರದ್ದಾದ ಬಳಿಕ ದೇಶಕ್ಕೆ ಬೆಂಕಿ ಹತ್ತುತ್ತದೆ ಎಂದ್ದಿದ್ದರು, ಆದರೆ ಮೋದಿ ಅದ್ಯಾವುದಕ್ಕೂ ಅವಕಾಶ ಕೊಡಲಿಲ್ಲ. ತ್ರಿವಳಿ ತಲಾಕ್ ರದ್ದು, ವಕ್ಫ್ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಜನಪರ ಕೆಲಸ ಮಾಡಿದ್ದಾರೆ. ಉಗ್ರರನ್ನು ಮಟ್ಟ ಹಾಕುವ ಕೆಲಸ ಮಾಡಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ ಎಂದು ಮೋದಿ ಸರ್ಕಾರದ ಯೋಜನೆ ಮತ್ತು ಅಭಿವೃದ್ಧಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ